ಚುನಾವಣಾ ಸಿದ್ಧತೆ ಕುರಿತು ಶಿಕ್ಷಣ ಇಲಾಖೆ ಚರ್ಚೆ

Electionn--1

ಬೆಂಗಳೂರು, ಅ.12- ಮುಂಬರುವ ವಿಧಾನಸಭೆ ಚುನಾವಣೆಗಾಗಿ ಇತ್ತ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ, ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದರೆ, ಅತ್ತ ಶಿಕ್ಷಣ ಇಲಾಖೆ ಚುನಾವಣಾ ಸಿದ್ಧತೆಗಳನ್ನು ಮಾಡಿಕೊಳ್ಳತೊಡಗಿದೆ. ಚುನಾವಣೆಗಾಗಿ ಅಗತ್ಯ ಸಿಬ್ಬಂದಿ, ಬೇಕಾದ ಕೊಠಡಿಗಳ ಬಗ್ಗೆ ಚರ್ಚೆ ನಡೆಸುತ್ತಿದೆ.  ಮೇ 13ಕ್ಕೆ ಪ್ರಸ್ತುತ ಸರ್ಕಾರದ ಅವಧಿ ಮುಗಿಯಲಿದ್ದು, ಅಷ್ಟರೊಳಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹುತೇಕ ಶಿಕ್ಷಣ ಇಲಾಖೆ ಸಿಬ್ಬಂದಿ, ಶಾಲಾ ಕೊಠಡಿಗಳು ಚುನಾವಣಾ ಉದ್ದೇಶಕ್ಕೆ ಬಳಕೆಯಾಗುತ್ತವೆ. ಹಾಗಾಗಿ ಶಿಕ್ಷಣ ಇಲಾಖೆ ಅಗತ್ಯವಿರುವ ಸಿಬ್ಬಂದಿ, ಶಾಲಾ-ಕಾಲೇಜುಗಳ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಸಮಯದ ಬಗ್ಗೆ ಚರ್ಚೆ ನಡೆಸಿದ್ದು, ನಿಗದಿತ ಅವಧಿಗೂ ಮುನ್ನ ಪರೀಕ್ಷೆ ನಡೆಸುವ ಬಗ್ಗೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

8.5 ಲಕ್ಷ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದು, 6.5 ಲಕ್ಷ ಪಿಯುಸಿ ವಿದ್ಯಾರ್ಥಿಗಳಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಮಾರ್ಚ್ ಅಂತ್ಯದೊಳಗೆ ಅಥವಾ ಏಪ್ರಿಲ್ 2ನೆ ವಾರದೊಳಗೆ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಸಂಭಾವ್ಯ ಚುನಾವಣಾ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಸುವುದು, ಮೌಲ್ಯಮಾಪನ ಮಾಡುವುದೂ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆ ಚರ್ಚೆ ನಡೆಸಿದೆ. ಶಾಲಾ ಶಿಕ್ಷಕರಿಗೆ ಚುನಾವಣೆ ಸಂಬಂಧಿತ ಅಗತ್ಯ ತರಬೇತಿ ನೀಡುವ ಬಗ್ಗೆ ಚರ್ಚೆ ನಡೆದಿದೆ.

Facebook Comments

Sri Raghav

Admin