ಜಲಾಶಯಗಳ ಭಾಗದಲ್ಲಿ ಮೋಡಬಿತ್ತನೆ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Cloud-Seeding--01

ಬೆಂಗಳೂರು, ಅ.12- ಕಳೆದ ಎರಡು ತಿಂಗಳಿನಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಿಸಲು ಮಾಡುತ್ತಿದ್ದ ಮೋಡ ಬಿತ್ತನೆಯನ್ನು ಈಗ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮುಂದುವರಿಸಲಾಗಿದೆ. ರಾಜ್ಯದ ಒಳನಾಡಿನಲ್ಲಿ ಮೋಡ ಬಿತ್ತನೆ ಆರಂಭಿಸಿದ ನಂತರ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಹಲವೆಡೆ ಭಾರೀ ಮಳೆ ಕೂಡ ಆಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಒಳನಾಡಿನಲ್ಲಿ ಮೋಡ ಬಿತ್ತನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಅಲ್ಲದೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗಿರುವುದರಿಂದ ಆ ಭಾಗದಲ್ಲಿ ಮೋಡ ಬಿತ್ತನೆ ಮುಂದುವರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಸೂಫಾ, ವರಾಹಿ, ಹೇಮಾವತಿ, ಕೆಆರ್‍ಎಸ್, ಮಲಪ್ರಭ, ಘಟಪ್ರಭ ಸೇರಿದಂತೆ ಹಲವು ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಆದರೆ, ಕಳೆದ ಬಾರಿಗಿಂತ ಸ್ವಲ್ಪ ಹೆಚ್ಚು ನೀರು ಸಂಗ್ರಹವಾಗಿರುವುದು ಸಮಾಧಾನ ತರುವ ಸಂಗತಿಯಾಗಿದೆ.

ಈ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮಳೆ ಪ್ರಮಾಣವನ್ನು ಹೆಚ್ಚಿಸಲು ಇನ್ನೂ ಎರಡು-ಮೂರು ವಾರಗಳ ಕಾಲ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಒಳನಾಡಿನಲ್ಲಿ ಮೋಡ ಬಿತ್ತನೆಯ ಅಗತ್ಯವಿಲ್ಲದೆಯೂ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಹೀಗಾಗಿ ಜಲಾಶಯಗಳಿಗೆ ಹೆಚ್ಚಿನ ನೀರಿನ ಅಗತ್ಯವಿರುವುದರಿಂದ ಜಲಾಶಯಗಳ ಭಾಗದಲ್ಲಿ ಮೋಡ ಬಿತ್ತನೆ ಮುಂದುವರಿಸಲಾಗುತ್ತದೆ. ಈಗಾಗಲೇ ಒಳನಾಡಿನಲ್ಲಿ ಮೋಡ ಬಿತ್ತನೆ ಮಾಡಿರುವುದರಿಂದ ಶೇ.15ಕ್ಕೂ ಹೆಚ್ಚು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin