ಸಿಎಂ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಪದ್ಮನಾಭ ರೆಡ್ಡಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Padmanabha

ಬೆಂಗಳೂರು,ಅ.12-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಅಸಂವಿಧಾನಿಕ ಪದ ಬಳಕೆ ಮಾಡಿದ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆಯಲ್ಲಿರುವ ರೆಡ್ಡಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟಿಸಿದರು.  ನಿನ್ನೆ ಬಿಜೆಪಿಯವರು ರಸ್ತೆಗುಂಡಿ, ಕಸದ ಸಮಸ್ಯೆ ಖಂಡಿಸಿ ಬಿಬಿಎಂಪಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ವೇಳೆ ಪದ್ಮನಾಭ ರೆಡ್ಡಿ , ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಅಸಂವಿಧಾನಿಕ ಪದ ಬಳಕೆ ಮಾಡಿದ್ದರು ಹಾಗೂ ಸಚಿವ ಜಾರ್ಜ್ ವಿರುದ್ದವೂ ಹೇಳಿಕೆ ನೀಡಿದ್ದರು.

ಇದಕ್ಕೆ ಸೇಡು ತೀರಿಸಿಕೊಂಡ ಕಾಂಗ್ರೆಸಿಗರು ಪದ್ಮನಾಭ ರೆಡ್ಡಿ ಕಚೇರಿಗೆ ಬೀಗ ಜಡಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ಪದ್ಮನಾಭ ರೆಡ್ಡಿ ಅವರು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರಲ್ಲದೆ ರೆಡ್ಡಿ ಭಾವಚಿತ್ರಕ್ಕೆ ಹೊಡೆದು ತಮ್ಮ ಆಕ್ರೋಶ ತೀರಿಸಿಕೊಂಡರು.

Facebook Comments

Sri Raghav

Admin