ಸಿಎಂ ಸಿದ್ದರಾಮಯ್ಯನವರು ಯಾವ ತಪ್ಪು ಮಾಡಿಲ್ಲ : ಎಚ್.ಸಿ.ಮಹದೇವಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Hc-mahadevappa

ಬೆಂಗಳೂರು,ಅ.12- ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಯಾವುದೇ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿಲ್ಲ. ಸಿದ್ದು ವಿರುದ್ದ ಬಿಜೆಪಿ ಮುಖಂಡ ಬಿ.ಜೆ. ಪುಟ್ಟಸ್ವಾಮಿ ಅವರು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದರು.  ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಸೋಲುವ ಭೀತಿಯಲ್ಲಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅಥವಾ ಗೆಲ್ಲಿಸಲು ಶ್ರೀನಿವಾಸ್ ಪ್ರಸಾದ್ ಯಾರು, ಅವರ ಶಕ್ತಿ ಏನೆಂಬುದು ಕಳೆದ ಚುನಾವಣೆಯಲ್ಲಿ ಜನರಿಗೆ ಗೊತ್ತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರು ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬೆಂಬಲಿಸಿದರು.
ಬಿಜೆಪಿಯವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಡಿರುವ ಆರೋಪಕ್ಕೆ ಯಾವುದೇ ಹುರುಳು ಇಲ್ಲ ಆಧಾರವೂ ಇಲ್ಲ ಎಂದರು.

ಶ್ರೀನಿವಾಸ್ ಪ್ರಸಾದ್, ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್ ಒಂದಾಗುತ್ತಿದ್ದಾರಲ್ಲ ಎಂಬ ವರದಿಗಾರರ ಪ್ರಶ್ನೆಗೆ, ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲ ದುಷ್ಟಶಕ್ತಿಗಳು ಸೇರಿ ಸಿದ್ದರಾಮಯ್ಯನವರನ್ನು ಸೋಲಿಸಲು ನಿಂತಿದ್ದವು. ಆದರೆ ಕ್ಷೇತ್ರದ ಜನತೆ ಅವರ ಕೈ ಹಿಡಿದರು. ಮುಂದೆಯೂ ಜನ ಸಿದ್ದರಾಮಯ್ಯನವರನ್ನು ಆರ್ಶೀವದಿಸಲಿದ್ದಾರೆ ಎಂದರು.

ತರಾತುರಿಯಲ್ಲಿ ಸಮ್ಮೇಳನ ಆಯೋಜಿಸಲಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಕನ್ನಡದ ಕಂಪನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ಆಶಾಭಾವನೆ ಇದೆ. ಈ ಸಮ್ಮೇಳನವನ್ನು ಸಾಹಿತಿಗಳು ವಿರೋಧಿಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ವಿರೋಧಿಸುವವರು ಕೂಡ ಭಾಗವಹಿಸುವಂತೆ ಮನವಿ ಮಾಡುತ್ತೇನೆ ಎಂದರು.

Facebook Comments

Sri Raghav

Admin