ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್

ಈ ಸುದ್ದಿಯನ್ನು ಶೇರ್ ಮಾಡಿ

Election-Commision

ನವದೆಹಲಿ, ಅ.13- ಗಿರಿಶಿಖರಗಳ ನಾಡು ಪ್ರವಾಸಿಗರ ಸ್ವರ್ಗ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜ್ಯದ 68 ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 9ರಂದು ಮತದಾನ ನಡೆಯಲಿದ್ದು, ಡಿ.18ರಂದು ಮತ ಎಣಿಕೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡುವಿನ ಜಿದ್ದಾಜಿದ್ದಿನ ಕಣವಾಗಿರುವ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಗುರುವಾರದಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ನವದೆಹಲಿಯಲ್ಲಿ ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ. ಎ.ಕೆ. ಜ್ಯೋತಿ ದಿನಾಂಕವನ್ನು ಪ್ರಕಟಿಸಿದರು.

ಹಿಮಾಚಲ ಪ್ರದೇಶದ ಜತೆಗೆ ಪ್ರಧಾನಿ ನರೇಂದ್ರ ಮೋದಿಯವರ ತವರೂರು ಗುಜರಾತಿಗೂ ದಿನಾಂಕ ಘೋಷಣೆ ಮಾಡಲಿದ್ದಾರೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ದಿನಾಂಕ ಘೋಷಣೆ ಮಾಡಲಿಲ್ಲ. ಗುರುವಾರವೇ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಯಾವುದೇ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷ ಒಡ್ಡುವುದು, ಹೊಸ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಇದೇ ಮೊದಲ ಬಾರಿಗೆ ಮತದಾನಕ್ಕೆ ವಿವಿಪ್ಯಾಟ್ ಬಳಸಲಾಗಿದೆ. ಇದರಿಂದ ಯಾರು ಯಾರಿಗೆ ಮತದಾನ ಮಾಡಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಬಹುದು.

Facebook Comments

Sri Raghav

Admin