ಅಪರಿಚಿತ ವ್ಯಕ್ತಿ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ದಾಬಸ್‍ಪೇಟೆ, ಅ.13-ಪಟ್ಟಣದ ಅಗಳಕುಪ್ಪೆ ರಸ್ತೆಯ ಕಿರಣ್ ಹೋಟೆಲ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪತ್ತೆಯಾದ ಶವವು ಸುಮಾರು 45 ವರ್ಷ ವಯಸ್ಸಾಗಿದ್ದು, 5.2 ಅಡಿ ಎತ್ತರ ಗೋಧಿ ಮೈಬಣ್ಣ ಹೊಂದಿದ್ದು ಸಧೃಡಕಾಯವಾದ ಶರೀರವನ್ನು ಹೊಂದಿದ್ದು, ಗಡ್ಡ ಮೀಸೆ ಇರುತ್ತದೆ. ಪತ್ತೆಯಾದ ಶವವನ್ನು ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದ್ದು, ದಾಬಸ್‍ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಬಂಧಪಟ್ಟವರು ದಾಬಸ್‍ಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.

Facebook Comments