ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡುವುದೇ ಮುಖ್ಯ ಧ್ಯೇಯ

ಈ ಸುದ್ದಿಯನ್ನು ಶೇರ್ ಮಾಡಿ

dpt-2
ದಾಬಸ್‍ಪೇಟೆ, ಅ.13-ಜನರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಿ ಅವರನ್ನು ಗುಣಮುಖರನ್ನಾಗಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಆರೋಗ್ಯ ಭಾರತಿ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷ ಡಾ.ಚಂದ್ರಶೇಖರ್.ಬಿ.ಜಿ. ತಿಳಿಸಿದರು. ಪಟ್ಟಣದ ಆರೋಗ್ಯ ಭಾರತಿ ಆಸ್ಪತ್ರೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಆಸ್ಪತ್ರೆ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು ಒಂದೇ ಭಾರತಆರೋಗ್ಯ ಭಾರತ ಎಂಬ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಯನ್ನು ಜನರಿಗೆ ನೀಡುವ ಕಾರ್ಯದಲ್ಲಿ ತೊಡಗಿದ್ದೇವೆ ಎಂದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ಜೊತೆ ತಮ್ಮ ಆರೋಗ್ಯ ಹಾಗೂ ಸ್ವಚ್ಛತೆ ಕಡೆ ಗಮನಹರಿಸುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ಸಹ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾ.ಇಮ್ತಿಯಾಜ್ ಮಾತನಾಡಿ, ಆರೋಗ್ಯ ಭಾರತಿ ಆಸ್ಪತ್ರೆ ವತಿಯಿಂದ ಕಳೆದ ವರ್ಷ ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಇನ್ನೂ ಮುಂದೆಯೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಶಿಬಿರಗಳನ್ನು ಹಮ್ಮಿಕೊಂಡು ಜನರಿಗೆಉಚಿತ ತಪಾಸಣೆ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದರು. ಡಾ.ಪವಿತ್ರಚಂದ್ರಶೇಖರ್, ಡಾ.ತುಳಸಿ, ಆಸ್ಪತ್ರೆಯ ಸಿಬ್ಬಂದಿಗಳಾದ ವರ್ಷಿತ್, ಶಾಂತ, ರಶ್ಮಿ, ಪುಷ್ಪ, ಜಲಜಾಕ್ಷಿ, ರಮ್ಯ, ಶಾರದಾ, ಶೈಲಾ, ಅಶ್ವಿನಿ, ವನಿತ, ಸುರೇಶ್, ಚೇತನ್, ರೇಣುಕಾ, ಗೌರಿ, ಸಾಕಮ್ಮ, ಮಂಜಮ್ಮ ಹಾಜರಿದ್ದರು.

Facebook Comments

Sri Raghav

Admin