ತಿರುಮಣಿ ಸೋಲಾರ್ ಪಾರ್ಕ್‍ನಲ್ಲಿ ಕಾರ್ಮಿಕನ ಅನುಮಾನಾಸ್ಪದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Solar-Park--01

ತುಮಕೂರು ಅ.13-ಜಿಲ್ಲೆಯ ಪಾವಗಡ ತಾಲೂಕು ತಿರುಮಣಿಯಲ್ಲಿರುವ ಸೋಲಾರ್ ಪಾರ್ಕ್‍ನಲ್ಲಿ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಪಿಕಾಶ್ (40) ಮೃತ ಕಾರ್ಮಿಕ. ತಿರುಮಣಿಯಲ್ಲಿರುವ ಸೋಲಾರ್ ಪಾರ್ಕ್‍ನಲ್ಲಿ ನಿನ್ನೆ ಎಂದಿನಂತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಇಂದು ಬೆಳಗ್ಗೆ 8 ಗಂಟೆಯಾದರೂ ಎದ್ದಿಲ್ಲ ಎಂದು ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದಿದೆ. ಕೂಡಲೇ ತಿರುಮಣಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin