ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪೀಕುತ್ತಿದ್ದ ಖತರ್ನಾಕ್ ವಂಚಕನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrested-Man

ಮೈಸೂರು, ಅ.13-ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ರಾಜ್ಯಾದ್ಯಂತ ನೂರಾರು ಯುವಕರನ್ನು ವಂಚಿಸಿದ್ದ ಖತರ್ನಾಕ್ ವಂಚಕನನ್ನು ಪೊಲೀಸರು ಕೊನೆಗೂ ತಮ್ಮ ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೈಲ್ವೆ ಇಲಾಖೆಯ ಮಾಜಿ ಉದ್ಯೋಗಿ ಟಿ.ವಿಲ್ಸನ್ ಬಂಧಿತ ವಂಚಕ.
ಉದ್ಯೋಗ ಕೊಡಿಸುವ ನೆಪದಲ್ಲಿ ವಸೂಲಿ ಮಾಡಿದ್ದ ಹಣದಲ್ಲಿ ವಿಲಾಸಿ ಜೀವನ ಮಾಡುತ್ತ ಕಾರಿನಲ್ಲಿ ಓಡಾಡುತ್ತ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದನು. ದಾವಣಗೆರೆ ಪೊಲೀಸರು ಈತನನ್ನು ಬಾಡಿ ವಾರೆಂಟ್ ಮೇಲೆ ಬಂಧಿಸಿ ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ರೈಲ್ವೆ ಡಿವಿಷನ್ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿದ್ದ ವಿಲ್ಸನ್ ಜನರಲ್ ಮ್ಯಾನೇಜರ್ ಕೋಟಾದಲ್ಲಿ ನೇರ ನೇಮಕಾತಿ ಮಾಡಿಸುವುದಾಗಿ ಹಲವರನ್ನು ನಂಬಿಸಿ 5 ಕೋಟಿ ರೂ.ಗೂ ಹೆಚ್ಚು ಹಣ ಪಡೆದುಕೊಂಡಿದ್ದನು.

ರಾಜ್ಯಾದ್ಯಂತ 25ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ. ಹಣ ಪಡೆದವರಿಗೆ ರೈಲ್ವೆ ಅಧಿಕಾರಿಗಳ ನಕಲಿ ಸಹಿ ಸೀಲು ಬಳಸಿ ನೇರ ನೇಮಕಾತಿ ಆದೇಶ ಪತ್ರ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನನ್ನು ವಶಕ್ಕೆ ಪಡೆದಿರುವ ಲಕ್ಷ್ಮೀಪುರ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Facebook Comments

Sri Raghav

Admin