ಶಬರಿಮಲೈಗೆ ಮಹಿಳೆ ಪ್ರವೇಶ ನಿಷೇಧ ಅರ್ಜಿ ಸಾಂವಿಧಾನಿಕ ಪೀಠದ ಹೆಗಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

shabarimai
ನವದೆಹಲಿ, ಅ. 13-ಕೇರಳದಲ್ಲಿರುವ ಇತಿಹಾಸ ಪ್ರಸಿದ್ಧ ಶಬರಿಮಲೈ ದೇವಸ್ಥಾಕ್ಕೆ ಮಹಿಳೆಯರು ಪರವೇಶಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಇಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ಅರ್ಜಿ ಕುರಿತಂತೆ ಹಲವು ಪ್ರಶ್ನೆಗಳನ್ನೆತ್ತಿರುವ ಸರ್ವೋಚ್ಚ ನ್ಯಾಯಾಲಯ, ಶಬರಿಮಲೈ ದೇವಾಲಯದಲ್ಲಿ ಮಹಿಳೆಯರು ಪೂಜೆ ಸಲ್ಲಿಸಬೇಕೇ ಅಥವಾ ಸಲ್ಲಿಸ ಬಾರದೇ? ಮಹಿಳೆಯರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದನ್ನು ನಿಷೇಧಿಸಿದರೆ ಅದು ಕಾನೂನು ಉಲ್ಲಂಘನೆಯಾಗುವುದಿಲ್ಲವೇ? ಮುಂತಾದ ವಿಷಯಗಳ ಬಗ್ಗೆ ಕೂಲಂಕಷ ವಿಚಾರಣೆ ನಡೆಸುವಂತೆ ಪೀಠಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ಮೂವರ ನ್ಯಾಯಾಧೀಶರ ಪೀಠವು ಈ ಅರ್ಜಿ ಬಗ್ಗೆ ಪರಿಶೀಲನೆ ನಡೆಸಿ ನಂತರ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿತು. ಮಹಿಳೆಯರ ಮತ್ತು ಸಮಾಜದಲ್ಲಿರುವ ತಾರತಮ್ಯದ ಕುರಿತಂತೆಯೂ ಪಂಚ ಸದಸ್ಯರ ಪೀಠ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿ ಮಿಶ್ರಾ ಪೀಠ ಹೇಳಿದೆ.

Facebook Comments