ಮಳೆಯಿಂದ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha--01

ಬೆಂಗಳೂರು,ಅ.14- ನಗರದಲ್ಲಿ ರಾತ್ರಿ ಸುರಿದ ಮಳೆ ಅನಾಹುತದಲ್ಲಿ ಮೃತರಾದವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ. ಮಳೆ ಅನಾಹುತ ಸಂಬಂಧ ಬೆಳಗ್ಗೆ ಸಹ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ನಗರದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ಹೆಚ್ಚಾಗಿ ಅನಾಹುತ ಸಂಭವಿಸುವ ಪ್ರದೇಶಗಳಿಗೆ ಎಂಜಿನಿಯರುಗಳನ್ನು ಕಳುಹಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.  ಬೆಂಗಳೂರಿನ ಸಚಿವರು, ಶಾಸಕರು, ಪಾಲಿಕೆ ಸದಸ್ಯರು ಆಯಾ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.  ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯುಕ್ತ ಮಂಜುನಾಥ ಪ್ರಸಾದ್ಅವರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.

Facebook Comments

Sri Raghav

Admin