ಸಚಿವ ರೋಷನ್ ಬೇಗ್ ವಿರುದ್ದ ದಾಖಲಾಯ್ತು ಕ್ರಿಮಿನಲ್ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

Minister-Roshan-Baig
ಬೆಂಗಳೂರು, ಅ.14- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಾರ್ತಾ ಸಚಿವ ರೋಷನ್‍ಬೇಗ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಮೂರು ದಿನಗಳ ಹಿಂದೆ ಪುಲಿಕೇಶಿ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ರೋಷನ್‍ಬೇಗ್ ಅವರು, ಪ್ರಧಾನಿಯವರ ಬಗ್ಗೆ ತಮಿಳು ಭಾಷೆಯಲ್ಲಿ ಅಶ್ಲೀಲ ಪದ ಬಳಕೆ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ತಾಣಗಳಲ್ಲಿ ಹರಿದಾಡಿತ್ತು ಮಾತ್ರವಲ್ಲ, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಬೇಗ್ ವಿರುದ್ಧ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ರಾಷ್ಟ್ರದ ಉನ್ನತ ಸ್ಥಾನದಲ್ಲಿರುವ ಪ್ರಧಾನಮಂತ್ರಿಗಳನ್ನು ಅಶ್ಲೀಲ ಪದಗಳಿಂದ ನಿಂದಿಸುವ ಮೂಲಕ ಸಮಸ್ತ ಭಾರತೀಯರನ್ನೇ ಅವಮಾನಿಸಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ದೂರಿನಲ್ಲಿ ವಿನಂತಿಸಿಕೊಂಡಿದ್ದಾರೆ.

Facebook Comments

Sri Raghav

Admin