ಈಜಿಪುರ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

Ijipura-Building-Collapse-4

ಬೆಂಗಳೂರು,ಅ.16-ಈಜಿಪುರ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ.ಗಳ ಪರಿಹಾರ ನೀಡಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಈ ವಿಷಯ ಪ್ರಕಟಿಸಿದರು.  ಕಟ್ಟಡ ತೆರವು ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸೂಚಿಸಿದ ಅವರು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಗಾಯಗೊಂಡಿರುವ ಆರು ಮಂದಿಯಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು. ಘಟನಾ ಸ್ಥಳದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ , ಮೇಯರ್ ಸಂಪತ್ ರಾಜ್, ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಬೀಡುಬಿಟ್ಟು ತೆರವು ಕಾರ್ಯಾಚರಣೆ ವೀಕ್ಷಿಸಿದರು.

Facebook Comments

Sri Raghav

Admin