ಬೀದರ್ : ಮಳೆಯಿಂದ ಜಲಾವೃತವಾಗಿದ್ದ ಪ್ರದೇಶದಲ್ಲಿ ಹೊಂಡಕ್ಕೆ ಬಿದ್ದು ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bidar--02

ಬೀದರ್,ಅ.16-ನಿನ್ನೆ ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದ ಇಡೀ ಪ್ರದೇಶ ಜಲಾವೃತವಾಗಿದ್ದು , ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಲಕ್ಷ್ಮಿ ಇಂದ್ರಜಿತ್ ವಾಡೇಕರ್(52), ಕೇಶವ ಬಾಬುರಾವ್ ಬೈನಾಕೆ(40) ಮತ್ತು ಸತ್ಯವತಿ ಕೇಶವ ಬೈನಾಕೆ(32) ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಈ ಪ್ರದೇಶವೆಲ್ಲ ಜಲಾವೃತವಾಗಿರುವುದರಿಂದ ರಸ್ತೆ ಯಾವುದು, ಹೊಂಡ ಯಾವುದು ಎಂದು ತಿಳಿಯದೆ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೂವರ ಶವಗಳನ್ನೂ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.  ಮಂಠಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಕೂಡ ಧಾರಾಕಾರ ಮಳೆ ಮುಂದುವರೆದಿದ್ದು , ಜನರಿಗೆ ಸೂಕ್ತ ಎಚ್ಚರಿಕೆ ನೀಡಲಾಗಿದೆ.

Facebook Comments

Sri Raghav

Admin