ಹಿಂದುಳಿದವರ್ಗಗಳಿಗೆ ಏನು ಮಾಡಿದ್ದೀರಿ..? : ಸಿದ್ದರಾಮಯ್ಯಗೆ ಡಿವಿಎಸ್ ಸವಾಲ್

ಈ ಸುದ್ದಿಯನ್ನು ಶೇರ್ ಮಾಡಿ

Sadanandagowda--02

ಬೆಂಗಳೂರು, ಅ.23-ಅಹಿಂದ ವರ್ಗದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದವರ್ಗಗಳ ಆಯೋಗಕ್ಕೆ ಸಂವಿಧಾನಬದ್ಧ ಸ್ಥಾನಮಾನ ನೀಡುವ ಕಾಯ್ದೆಗೆ ಕಾಂಗ್ರೆಸ್ ಏಕೆ ಅಡ್ಡಿಪಡಿಸುತ್ತದೆ ಎಂಬುದನ್ನು ಜನತೆಯ ಮುಂದೆ ಬಹಿರಂಗ ಪಡಿಸಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸವಾಲು ಹಾಕಿದ್ದಾರೆ. ನ.2ರಿಂದ ಆರಂಭವಾಗಲಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನೆಯ ಯಾತ್ರೆಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಹಿಂದುಳಿದ ವರ್ಗದವರಿಗೆ ಸಂವಿಧಾನಬದ್ಧವಾಗಿ ವಿಶೇಷ ಸವಲತ್ತುಗಳನ್ನು ನೀಡಲು ಆಯೋಗಕ್ಕೆ ತಿದ್ದುಪಡಿ ಮಾಡಲಾಗಿದೆ. ಲೋಕಸಭೆಯಲ್ಲಿ ಈ ಕಾಯ್ದೆಯನ್ನು ಬಹುಮತದಿಂದ ಅಂಗೀಕಾರ ಮಾಡಲಾಗಿದೆ. ಆದರೆ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಯಾವ ಕಾರಣಕ್ಕಾಗಿ ಅಡ್ಡಿಪಡಿಸಿದೆ ಎಂದು ಪ್ರಶ್ನಿಸಿದರು. ಅಹಿಂದದ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುವ ಸಿದ್ದರಾಮಯ್ಯ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇದರಿಂದ ಕಾಂಗ್ರೆಸ್‍ನ ವ್ಯಾಗ್ರಮುಖ ಏನೆಂಬುದು ಬಹಿರಂಗವಾಗಿದೆ. ನಿಮಗೆ ಹಿಂದುಳಿದವರ್ಗಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮೊದಲು ಕಾಯ್ದೆಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿದರು.

ದೇಶದ ರಾಜಕಾರಣದಲ್ಲಿ ಹೊಸ ವ್ಯವಸ್ಥೆ ಬರಬೇಕೆಂಬುದು ಮತದಾರರ ಅಭಿಪ್ರಾಯ. ವಿಚಾರ ಆಧಾರದ ಮೇಲೆ ಮತದಾನ ನಡೆಯಬೇಕು. ಪ್ರಜಾತಂತ್ರ ಮೌಲ್ಯವನ್ನು ಎತ್ತಿಹಿಡಿಯಬೇಕೆಂಬ ಆಶಯದೊಂದಿಗೆ ನವಕರ್ನಾಟಕ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದ್ದೇವೆ. ಇದು ಸಂಪೂರ್ಣವಾಗಿ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ 224 ಕ್ಷೇತ್ರಗಳಲ್ಲಿ ಯಡಿಯೂರಪ್ಪನವರು ಮತ್ತು ನಮ್ಮ ಪಕ್ಷದ ಮುಖಂಡರು ಸಂಚರಿಸಿ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ರಾಜ್ಯದ ದುರಾಡಳಿತ, ಭ್ರಷ್ಟಾಚಾರವನ್ನು ಬಯಲು ಮಾಡಲಿದ್ದಾರೆ. ನಾಲ್ಕೂವರೆ ವರ್ಷಗಳಲ್ಲಿ ನಡೆದಿರುವ ಹಗರಣಗಳನ್ನು ಜನರ ಮುಂದೆ ಬಟಾಬಯಲು ಮಾಡಲಿದ್ದೇವೆ ಎಂದರು.

ಈಗಿನ ಸ್ಥಿತಿಯಲ್ಲಿ ನಮ್ಮ ಪಕ್ಷಕ್ಕೆ ವಿಷಯನ್ 150 ತಲುಪುವುದಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದ ಅವರು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‍ನ ಆಡಳಿತ ಬಗ್ಗೆ ಜನರಿಗೆ ಮನವರಿಕೆಯಾಗಿದೆ. ಈ ಸರ್ಕಾರ ಎಷ್ಟು ಬೇಗ ಹೋಗುತ್ತದೆಯೋ ಎಂದು ಜನರು ಕಾಯುತ್ತಿದ್ದಾರೆ. ಮೋದಿ ಅವರ ಯಶಸ್ವಿ ಆಡಳಿತ, ಕಾರ್ಯಕರ್ತರ ಪರಿಶ್ರಮದಿಂದ ಅಧಿಕಾರಕ್ಕೆ ಬರಲಿದ್ದೇವೆ ಎಂದರು. ಪರಿವರ್ತನೆಯ ಯಾತ್ರೆಯ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಸದೆ ಶೋಭಾಕರಂದ್ಲಾಜೆ, ನ.2ರಿಂದ 2018 ಜನವರಿ 28ರವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಸುಮಾರು ಏಳೂವರಗೆ ಸಾವಿರ ಕಿ.ಮೀ.ವರೆಗೂ ಇದು ಸಂಚರಿಸಲಿದೆ. ರಾಷ್ಟ್ರದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ರ್ಯಾಲಿಯಾಗಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ನ.2ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರಾರಂಭವಾಗಿ ಪ್ರತಿಯೊಂದು ಜಿಲ್ಲೆ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದೆ. ಅಂದು ದಕ್ಷಿಣ ಭಾಗದ 114 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಲಕ್ಷ ಬೈಕ್‍ನಲ್ಲಿ 35ವರ್ಷದೊಳಗಿನ ಕಾರ್ಯಕರ್ತರು ಆಗಮಿಸುವರು. ಜತೆಗೆ ನಮ್ಮ ಪದಾಧಿಕಾರಿಗಳು ಸೇರಿದಂತೆ ಒಟ್ಟು 3 ಲಕ್ಷ ಕಾರ್ಯಕ ರ್ತರು ಸಮಾವೇಶಗೊಳ್ಳಲಿದ್ದಾರೆ ಎಂದು ವಿವರಿಸಿದರು. ಇಲ್ಲಿಂದ ಪ್ರಾರಂಭವಾಗಿ ಜನವರಿ 28ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಶೋಭಾ ತಿಳಿಸಿದರು. ಡಿ.21ರಂದು ಹುಬ್ಬಳ್ಳಿಯಲ್ಲಿ ಉತ್ತರ ಭಾಗದ ಬೃಹತ್ ರ್ಯಾಲಿ. ಜ.21ರಂದು ಮೈಸೂರು ಹಾಗೂ ಜ.28ರಲ್ಲಿ ಬೆಂಗಳೂರಿನಲ್ಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

Facebook Comments

Sri Raghav

Admin