ಪವರ್ ಮಿನಿಸ್ಟರ್ ಡಿಕೆಶಿ ಆಪ್ತನ ನಿವಾಸಗಳು ಮತ್ತು ಕಚೇರಿಗಳ ಮೇಲೆ ಐಟಿ ರೇಡ್

ಈ ಸುದ್ದಿಯನ್ನು ಶೇರ್ ಮಾಡಿ

IT-Raid-Income-Tax

ಬೆಂಗಳೂರು, ಅ.24- ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷಣ್ ನಿವಾಸಗಳು ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತರಾದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರ ನಿವಾಸದ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಸವೇಶ್ವರ ನಗರ, ಸದಾಶಿವನಗರ ಸೇರಿದಂತೆ 5 ಕಡೆಯ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ 50 ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

Facebook Comments

Sri Raghav

Admin