ಮೈಸೂರಲ್ಲಿ ಮನೆಯ ಛಾವಣಿ ಕುಸಿದು ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Mysuru--02

ಮೈಸೂರು, ಅ.24- ಮನೆಯ ಛಾವಣಿ ಕುಸಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಮಂಡಿಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೊಪ್ಪಿನ ಬೀದಿಯ ನಿವಾಸಿ ನಾಗೇಶ್ (45) ಮೃತಪಟ್ಟ ದುರ್ದೈವಿ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ನಾಗೇಶ್ ಅವರ ಮನೆ ಶಿಥಿಲಗೊಂಡಿತ್ತು. ಇಂದು ಮುಂಜಾನೆ ಮನೆಯವರೆಲ್ಲಾ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದೇ ಛಾವಣಿ ಬಿದ್ದ ಶಬ್ದಕ್ಕೆ ಅಕ್ಕಪಕ್ಕದ ಮನೆಯವರು ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಅಗ್ನಿಶಾಮಕದಳದವರು ಮತ್ತು ಮಹಾನಗರ ಪಾಲಿಕೆಯ ಅಭಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಅವಶೇಷಗಳಡಿ ಸಿಲುಕಿದೆ. ನಾಲ್ವರು ಮಕ್ಕಳನ್ನು ರಕ್ಷಿಸಿದ್ದು, ನಾಗೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin