ಟಿಪ್ಪುಸುಲ್ತಾನ್ ನನ್ನ ಹಾಡಿ ಹೊಗಳಿದ ರಾಷ್ಟ್ರಪತಿ, ಬಿಜೆಪಿ ಶಾಸಕರಿಗೆ ಶಾಕ್

ಈ ಸುದ್ದಿಯನ್ನು ಶೇರ್ ಮಾಡಿ

Kovind-Ramanath--02

ಬೆಂಗಳೂರು,ಅ.25-ರಾಷ್ಟ್ರಪತಿ ಭಾಷಣದಲ್ಲಿ ಟಿಪ್ಪು ಸುಲ್ತಾನ್ ಹೆಸರನ್ನು ಹೇಳಿದಾಗ ಬಿಜೆಪಿ ಶಾಸಕರಿಗೆ ಶಾಕ್. ಟಿಪ್ಪು ಸುಲ್ತಾನ್ ರಾಕೆಟ್ ತಂತ್ರಜ್ಞಾನದ ಜನಕ ಮತ್ತು ಬ್ರಿಟಿಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ದೇಶಪ್ರೇಮಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವಿಧಾನಸೌಧದ ವಜ್ರಮಹೋತ್ಸದ ಭಾಷಣದಲ್ಲಿ ಹೇಳುತ್ತಿದ್ದಂತೆ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಟಿಪ್ಪು ಸುಲ್ತಾನ್ ಐತಿಹಾಸಿಕ ಮರಣವನ್ನಪ್ಪಿದರು ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು. ಬಿಜೆಪಿ ಸದಸ್ಯರು ಬೇಸರ ವ್ಯಕ್ತಪಡಿಸಿದರು. ಟಿಪ್ಪು ಜಯಂತಿ ಆಚರಣೆ ಮಾಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಯಾವುದೇ ಕಾರಣಕ್ಕೂ ಜಯಂತಿ ಆಚರಣೆ ಮಾಡಬಾರದು ಎಂದು ಬಿಜೆಪಿ ಹೋರಾಟ, ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ರಾಜ್ಯಾದ್ಯಂತ ವಿವಾದ ಉಂಟಾಗಿದೆ.

ಈ ವಿವಾದದ ನಡುವೆ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದಿದೆ. ಟಿಪ್ಪು ಜಯಂತಿ ಆಚರಣೆ ಮಾಡಿದರೆ ಆಗುವ ಪರಿಣಾಮಕ್ಕೆ ಸರ್ಕಾರವೇ ಹೊಣೆ ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರಲ್ಲದೆ , ಟಿಪ್ಪು ಮತಾಂಧ, ಹಿಂದು ವಿರೋಧಿ, ಹಿಂದುಗಳನ್ನು ಸಾಮೂಹಿಕವಾಗಿ ಮತಾಂತರ ಮಾಡಿದ್ದ ಎಂದು ಆರೋಪಿಸಿದ್ದರು.  ಈ ಎಲ್ಲದರ ಮಧ್ಯೆ ನಡೆದ ವಜ್ರಮಹೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ತಾವು ಮಾಡಿದ ಭಾಷಣ ಮಾಡಿದ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್‍ನನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

Facebook Comments

Sri Raghav

Admin