ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಚುನಾವಣೆಗೆ ಫಿಕ್ಸ್ ಆಯ್ತು ಮಹೂರ್ತ

ಈ ಸುದ್ದಿಯನ್ನು ಶೇರ್ ಮಾಡಿ

Election-Commision

ನವದೆಹಲಿ,ಅ.25- ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಡಿ.9 ಮತ್ತು 14ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಗುಜರಾತ್ ವಿಧಾನಸಭೆ ಚುನಾವಣಾ ದಿನಾಂಕವನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತರಾದ ಎ.ಕೆ.ಜ್ಯೋತಿ, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ ಎಂದು ಹೇಳಿದರು.

ಒಟ್ಟು 182 ವಿಧಾನಸಭಾ ಕ್ಷೇತ್ರಗಳ 50,128 ಮತಗಟ್ಟೆಗಳಲ್ಲಿ ನಡೆಯುವ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳು(ಇವಿಎಂ) ಮತ್ತು ವಿವಿಪಿಎಟಿಗಳನ್ನು ಬಳಸಲಾಗುತ್ತದೆ ಎಂದು ಅವರು ತಿಳಿಸಿದರು.  ಗುಜರಾತ್‍ನಲ್ಲಿ ಒಟ್ಟು ನಾಲ್ಕು ಕೋಟಿ ಮೂವತ್ತು ಲಕ್ಷ ಮತದಾರರು ಇದ್ದು ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಡಿಸೆಂಬರ್ 18ರಂದು ಹಿಮಾಚಲ ಪ್ರದೇಶ ರಾಜ್ಯದೊಂದಿಗೆ ಗುಜರಾತ್‍ನ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಅವರು ತಿಳಿಸಿದರು.
ಗುಜರಾತ್‍ನ ವಿಧಾನಸಭಾ ಚುನಾವಣೆಯು ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಟೆಯ ಕಣವಾಗಿದ್ದು , ಜಿದ್ದಾಜಿದ್ದಿನ ಹೋರಾಟಕ್ಕೆ ವೇದಿಕೆ ಸಜ್ಜುಗೊಂಡಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ತವರು ಜಿಲ್ಲೆಯಾದ ಗುಜರಾತ್‍ನಲ್ಲಿ ಬಿಜೆಪಿಗೆ ಬಹುಮತ ಲಭಿಸಲಿದೆ ಎಂದು ಚುನಾವಣಾ ಸಮೀಕ್ಷಾ ವರದಿಗಳು ಈಗಾಗಲೇ ತಿಳಿಸಿವೆ.

Facebook Comments

Sri Raghav

Admin