ಪ್ರವಾಸಿ ಮಂದಿರದಲ್ಲಿ ಮೋಜುಮಸ್ತಿ ಮಾಡುತ್ತಿದ್ದವರಿಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ ಸತ್ಯವತಿ

ಈ ಸುದ್ದಿಯನ್ನು ಶೇರ್ ಮಾಡಿ

Satyavati--01

ಕೋಲಾರ,ಅ.25-ಪ್ರವಾಸಿ ಮಂದಿರ(ಐಬಿ)ದ ಮೇಲೆ ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ದಾಳಿ ಮಾಡಿ ಏಳು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ಮಧ್ಯಭಾಗದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇತ್ತೀಚಿನ ದಿನಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆ ಸುಮಾರಿನಲ್ಲಿ ಜಿಲ್ಲಾಧಿಕಾರಿ ಸತ್ಯವತಿ ಐಬಿ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಮೋಜುಮಸ್ತಿಯಲ್ಲಿ ತೊಡಗಿದ್ದವರು ಅಧಿಕಾರಿಗಳು ಬರುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಐಬಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ನಿಲುಗಡೆ ಸ್ಥಳದಲ್ಲಿದ್ದ ಏಳು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡು ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಪಿಎಸ್‍ಐ ಮುನೇಗೌಡ, ನಗರಸಭಾ ಕಮೀಷನರ್ ರಾಮ್‍ಪ್ರಸಾದ್, ಲೋಕೋಪಯೋಗಿ ಇಂಜಿನಿಯರ್ ಮುನಿ ಅಂಜನಪ್ಪ ಹಾಗೂ ಸಿಬ್ಬಂದಿ ಜಿಲ್ಲಾಧಿಕಾರಿ ಜೊತೆಯಲ್ಲಿದ್ದರು.

Facebook Comments

Sri Raghav

Admin