ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

kunigal-accident
ಕುಣಿಗಲ್, ಅ.26-ರಸ್ತೆ ಬದಿ ಕೆಟ್ಟು ನಿಂತಿದ್ದ ಟಿಪ್ಪರ್ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ ಸೊಪ್ಪಿನಹಳ್ಳಿಯ ಅಕ್ಷಯ್(22) ಮತ್ತು ಚನ್ನಪಟ್ಟಣ ತಾಲ್ಲೂಕಿನ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟವರು. ಈತನ ಹೆಸರು ತಿಳಿದು ಬಂದಿಲ್ಲ.

ಈ ಇಬ್ಬರು ವಿದ್ಯಾರ್ಥಿಗಳು ತುಮಕೂರು ಶ್ರೀದೇವಿ ಇಂಜನಿಯರಿಂಗ್ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದು, ನಿನ್ನೆ ಇಬ್ಬರೂ ಪಲ್ಸರ್ ಬೈಕ್‍ನಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ತೆರಳಿದ್ದರು. ಪ್ರವಾಸ ಮುಗಿಸಿ ಹಿಂದಿರುಗುತ್ತಿರುವಾಗ ಹುಲಿಯೂರುದುರ್ಗ ಹೋಬಳಿಯ ಬಂಡಿಹಳ್ಳಿಗೇಟ್‍ ಬಳಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್‍ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬೂರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಪಿಎಸ್‍ಐ ಮಂಜು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin