ಪತ್ರಕರ್ತರು-ರಾಜಕಾರಣಿಗಳ ನಡುವೆ ಪಾರದರ್ಶಕತೆ ಇರಲಿ : ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi--012

ನವದೆಹಲಿ,ಅ.28-ಶಾಸಕಾಂಗ ಮತ್ತು ಪತ್ರಿಕಾರಂಗ ಪ್ರಜಾಪ್ರಭುತ್ವದ ವ್ಯವಸ್ಥೆಯ ಪ್ರಮುಖ ಆಧಾರ ಸ್ತಂಭಗಳಾಗಿವೆ. ಜನರ ಹಿತಾಸಕ್ತಿ ರಕ್ಷಣೆಯಲ್ಲಿ ಮುಖ್ಯ ಪಾತ್ರ ವಹಿಸುವ ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಪಾರದರ್ಶಕತೆ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿಂದು ನಡೆದ ದೀಪಾವಳಿ ಮಿಲನ್ ಮತ್ತು ಪತ್ರಕರ್ತರೊಂದಿಗೆ ವಾರ್ಷಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪತ್ರಕರ್ತರೊಂದಿಗೆ ಇಂದು ನಡೆಸಿದ ಸಂವಾದವು ನನಗೆ ಹಳೆಯ ನೆನಪುಗಳು ಮರುಕಳಿಸುವಂತೆ ಮಾಡಿವೆ.

ಈ ಹಿಂದೆ ಕೆಲವೇ ಕೆಲವು ಪತ್ರಕರ್ತರು ಮಾತ್ರ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇಂದು ಮಾಧ್ಯಮ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದೆ. ಅಂತೆಯೇ ಅದರ ಜವಾಬ್ದಾರಿಯೂ ಹೆಚ್ಚಾಗಿದೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಂಪುಟ ಸಹದ್ಯೋಗಿಗಳು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಂಪಾದಕರು, ಹಿರಿಯ ಪತ್ರಕರ್ತರು ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಂಡರು.

Facebook Comments

Sri Raghav

Admin