ಬಿಹಾರದಲ್ಲಿ ಕಳ್ಳಭಟ್ಟಿ ಕುಡಿದ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

liquor-02

ರೋಹಟಾಸ್, ಅ.28-ಬಿಹಾರದ ರೋಹಟಾಸ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ನಾಲ್ವರು ಮೃತಪಟ್ಟು, ಆರು ಮಂದಿ ತೀವ್ರ ಆಸ್ವಸ್ಥರಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಸೇವನೆ ಮೇಲೆ ಎರಡು ವರ್ಷಗಳಿಂದ ನಿಷೇಧವಿದ್ದರೂ ಕಚ್ಚ್‍ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದನ್ವಾರ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಸ್ವಸ್ಥರಾದ ಆರು ಮಂದಿ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾನವ್‍ಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

Facebook Comments

Sri Raghav

Admin