ವೇಗವಾಗಿ ಬಂದು ಆಟೋಗೆ ಅಪ್ಪಳಿಸಿದ ಟಿಪ್ಪರ್ , 6 ಮಹಿಳೆಯರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02
ಅಮರಾವತಿ (ಆಂಧ್ರ), ಅ.28-ಅತಿ ವೇಗವಾಗಿ ಬಂದ ಟಿಪ್ಪರ್ ಒಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳೆಯರು ಮೃತಪಟ್ಟು, ಇತರ ಆರು ಮಂದಿ ತೀವ್ರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮೊದೆಕುರ್ರು ಬಳಿ ಸಂಭವಿಸಿದೆ. ಅಲ್ಲಾವರಂ ಗ್ರಾಮದ ಮಹಿಳೆಯರು ವಾಡಪಲ್ಲಿಯಲ್ಲಿನ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲೇ ಐವರು ಆಟೋ ಪ್ರಯಾಣಿಕರು ಮೃತಪಟ್ಟರು. ಮತ್ತೊಬ್ಬ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಾಳುಗಳನ್ನು ಕಾಕಿನಾಡದ ಸರ್ಕಾರಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ. ಈ ಅಪಘಾತದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ದು, ತನಿಖೆಗೆ ಆದೇಶಿಸಿದ್ದಾರೆ. ಗೃಹ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಎನ್. ಚಿನ್ನ ರಾಜಪ್ಪ ಘಟನೆ ನಡೆದ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

Facebook Comments

Sri Raghav

Admin