ಬೆಂಕಿಯ ಕೆನ್ನಾಲಿಗೆಗೆ 3 ಅಂಗಡಿ, 400ಕ್ಕೂ ಹೆಚ್ಚು ಬೈಕ್‍ಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

Fire--001

ಇಂಧೋರ್, ಅ.29-ಮೂರು ಅಂಗಡಿಗಳಿಗೆ ಬೆಂಕಿ ಬಿದ್ದು ಸುಮಾರು 400ಕ್ಕೂ ಹೆಚ್ಚು ಮೋಟಾರ್‍ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಇಂದೋರ್‍ನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಇಲ್ಲಿನ ಅಗ್ರಸೇನ್ ಚೌರಾಹ್ ಪ್ರದೇಶದಲ್ಲಿರುವ ಒಂದು ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು.   ಡುನೋಡುತ್ತಿದ್ದಮತೆಯೇ ಪಕ್ಕದಲ್ಲಿನ ಇನ್ನೆರಡು ಅಂಗಡಿಗಳಿಗೂ ವ್ಯಾಪಿಸಿಕೊಂಡಿತು. ತಕ್ಷಣ ಸ್ಥಳಕ್ಕೆ ಅಗ್ನಿಶಾಸಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ ಮಾರಾಟಕ್ಕಿಟ್ಟಿದ್ದ 400ಕ್ಕೂ ಹೆಚ್ಚು ಬೈಕ್‍ಗಳು ಬೆಂಕಿಗೆ ಆಹುತಿಯಾದವು.  ಈ ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

Facebook Comments

Sri Raghav

Admin