ಬೆಂಗಳೂರಿನ ಮನೆಯೊಂದರಲ್ಲಿ ಎಲ್ಪಿಜಿ ಗ್ಯಾಸ್ ಲೀಕ್ ಆಗಿ ನಾಲ್ಕು ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

gas

ಬೆಂಗಳೂರು, ಅ.29- ಮನೆಯೊಂದರಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಕಾಣಿಸಿಕೊಂಡು 4 ಮಂದಿ ಗಾಯಗೊಂಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ವೀರಸ್ವಾಮಿ ಲೇಔಟ್‍ನ ನರೇಂದ್ರ ಎಂಬುವರ ಮನೆಯಲ್ಲಿ ಈ ಅವಘಡ ನಡೆದಿದೆ. ಬೆಳಗ್ಗೆ ಸುಮಾರು 6.30ರಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ನರೇಂದ್ರ ಮತ್ತು ಅವರ ಪತ್ನಿ, ಮಗು ಹಾಗೂ ಅವರ ತಮ್ಮ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾವುದೇ ಪ್ರಾಣಾಪಾಯ ಇಲ್ಲ. ಕಾಡುಗೋಡಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin