ಜೆಪಿ ಭವನದಲ್ಲಿ ಗೌಡರ ಕುಟುಂಬದಿಂದ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Devegowda--02

ಬೆಂಗಳೂರು, ಅ.30- ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿಂದು ವಿಶೇಷ ಪೂಜೆ ನೆರವೇರಿಸಲಾಯಿತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು,  ನ್ನಮ್ಮದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ಆರ್.ಪ್ರಕಾಶ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಹಲವು ಮುಖಂಡರು ಪಾಲ್ಗೊಂಡಿದ್ದರು. ಗೋ ಪೂಜೆ, ಗಣಪತಿ ಹೋಮ ಸೇರಿದಂತೆ ವಿಶೇಷ ಪೂಜೆ ನೆರವೇರಿಸಲಾಯಿತು. ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ದೇವೇಗೌಡರು ಗೌರವ ಸಲ್ಲಿಸಿದರು.

Facebook Comments

Sri Raghav

Admin