ನಾಳೆಯೊಳಗೆ ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--01

ಬೆಂಗಳೂರು,ಅ.30-ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಯಾರನ್ನು ನೇಮಕ ಮಾಡಬೇಕೆಂಬ ವಿಚಾರ ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗಿದ್ದು ಇಂದು ಸಂಜೆ ಅಥವಾ ನಾಳೆಯೊಳಗೆ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೇಷ್ಠತೆ ಆಧಾರದ ಮೇಲೆ ಅರ್ಹರಾಗಿರುವ ಐದು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಅದರಲ್ಲಿ ಮೂರು ಮಂದಿ ರೇಸ್‍ನಲ್ಲಿದ್ದಾರೆ ಎಂದರು.

ನೀಲಮಣಿ.ಎನ್ ರಾಜು, ಕಿಶೋರ್‍ಚಂದ್ರ ಹಾಗೂ ಎಂ.ಎನ್.ರೆಡ್ಡಿ ಅವರಿದ್ದಾರೆ. ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಬೇಕೆಂಬ ವಿಚಾರವೂ ಸೇರಿದಂತೆ ಎಲ್ಲವನ್ನೂ ಸಮಾಲೋಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಲಿದ್ದಾರೆ. ತಮ್ಮನ್ನು ಒಳಗೊಂಡಂತೆ ಕಾನೂನು ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನೊಳಗೊಂಡ ಸಮಿತಿ ಅರ್ಹರನ್ನು ಸಿದ್ಧಪಡಿಸಿದೆ ಎಂದರು.

Facebook Comments

Sri Raghav

Admin