ಶೀಘ್ರದಲ್ಲೇ ಜೆಡಿಎಸ್‍ಗೆ ಸೇರ್ಪಡೆಯಾಗಿ ಮಾಗಡಿಯಿಂದ ಸ್ಪರ್ಧಿಸುವೆ : ಎ.ಮಂಜು

ಈ ಸುದ್ದಿಯನ್ನು ಶೇರ್ ಮಾಡಿ

Ramanagara

ರಾಮನಗರ, ಅ.30-ಶೀಘ್ರದಲ್ಲೇ ಜೆಡಿಎಸ್ ಪಕ್ಷಕ್ಕೆ ಸೇರಿ ಮಾಗಡಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಜಿಲ್ಲೆಯ ಪ್ರಭಾವಿ ಮುಖಂಡ ಎ.ಮಂಜು ತಿಳಿಸಿದ್ದಾರೆ. ಈಗಾಗಲೇ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರನ್ನು ಭೇಟಿಮಾಡುವುದೊಂದೇ ಬಾಕಿ ಇದ್ದು, ಪಕ್ಷದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಸುಮಾರು 50 ಸಾವಿರಕ್ಕೂಹೆಚ್ಚು ಅಭಿಮಾನಿಗಳ ಸಮ್ಮುಖದಲ್ಲಿ ಮಾಗಡಿಯ ಐತಿಹಾಸಿಕ ಕೆಂಪೇಗೌಡರ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಅಧಿಕೃತವಾಗಿ ಜೆಡಿಎಸ್‍ಗೆ ಸೇರುತ್ತೇನೆ ಎಂದು ಹೇಳಿದ್ದಾರೆ. ಬಿಡದಿ ಸಮೀಪದ ನೆಲ್ಲಿಗುಡ್ಡೆ ಕೆರೆಯಲ್ಲಿ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ಅನುಭವ ಹೊಂದಿದ್ದೇನೆ. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರು ನನ್ನ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.ಅವರು ಬಿಜೆಪಿಗೆ ಹೋಗುತ್ತಿದ್ದಾರೆ.ಆದರೆ, ನಾನು ಜೆಡಿಎಸ್ ಸೇರುತ್ತಿದ್ದೇನೆ. ರಾಜಕೀಯವೇ ಬೇರೆ, ಸ್ನೇಹವೇ ಬೇರೆ.ಈ ಹಿಂದೆ ಬಿಜೆಪಿಯವರು ನನ್ನನ್ನು ಮಾಗಡಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಆಹ್ವಾನ ನೀಡಿ ಬಹಳಷ್ಟು ಪ್ರಯತ್ನ ಮಾಡಿದ್ದರು.
ಆದರೆ, ಈಗಾಗಲೇ ನಾನು ದೇವೇಗೌಡರ ನಾಡಿನ ಕಾಳಜಿ, ರೈತಪರ ದೂರದೃಷ್ಟಿಯನ್ನು ಮನಸಾರೆ ಮೆಚ್ಚಿಕೊಂಡಿದ್ದೇನೆ. ಆದಕಾರಣ ಕಮಲ ನಾಯಕರ ಪ್ರಸ್ತಾಪವನ್ನು ನಯವಾಗಿಯೇ ತಳ್ಳಿಹಾಕಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin