ಮಂಡ್ಯದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Mk

ಮಂಡ್ಯ, ನ.01- ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕನ್ನಡರಾಜ್ಯೋತ್ಸವ ಪ್ರಯುಕ್ತ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಅವರು ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂಮುನ್ನ ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಅಲಕೃತಗೊಂಡ ಸಾರೋಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಕ್ರೀಡಾಂಗಣದವರೆಗೂ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಡೊಳ್ಳುಕುಣಿತ, ಪೂಜಾಕುಣಿತ, ವೀರಗಾಸೆ, ಮಂಗಳವಾದ್ಯಗಳು ಗಮನಸೆಳೆದವು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕು.ಮಂಜುಶ್ರೀ, ಎಸ್.ಪಿ.ರಾಧಿಕಾ, ಸಿಇಒ ಶರತ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ನಗರಸಭಾಧ್ಯಕ್ಷ ಹೊಸಳ್ಳಿ ಬೋರೇಗೌಡ ಇತರರು ಪಾಲ್ಗೊಂಡಿದ್ದರು. ಶಾಲಾ ಮಕ್ಕಳು ನಡೆಸಿಕೊಟ್ಟ ನೃತ್ಯ ಪ್ರದರ್ಶನ ಜನರ ಮೆಚ್ಚುಗೆಗೆ ಪಾತ್ರವಾಯಿತು.ರಾಜಕಾರಣದಲ್ಲಿ ಮತ್ತೊಮ್ಮೆ ಸಕ್ರಿಯವಾಗುವುದಾಗಿ ಆಸಕ್ತಿ ತೋರಿದ್ದ ಮಾಜಿ ಸಚಿವ, ಶಾಸಕ ಅಂಬರೀಶ್ ಗೈರು ಹಾಜರಾಗಿದ್ದರು.

Facebook Comments

Sri Raghav

Admin