ಬಿಜೆಪಿ ಪರಿವರ್ತನಾ ಬೈಕ್ ರ‍್ಯಾಲಿಗೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

BJP-raLLy-1
ತುಮಕೂರು, ನ. 2- ಭಾರತೀಯ ಜನತಾ ಪಾರ್ಟಿ ಬೆಂಗಳೂರಿನ ವಸ್ತು ಪ್ರದರ್ಶನದ ಮೈದಾನದಲ್ಲಿ ಹಮ್ಮಿಕೊಂಡಿರುವ ನವ ಕರ್ನಾಟಕದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಬಹಿರಂಗ ಸಭೆಗೆ ನಗರದ ಸೇರಿದಂತೆ ಜಿಲ್ಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಸುಮಾರು 8 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ತೆರಳಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಬೆಳಿಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ. ಜ್ಯೋತಿಗಣೇಶ್ ರ‍್ಯಾಲಿಗೆ ಚಾಲನೆ ನೀಡಿದರು.

ಜಿಲ್ಲೆಯ ಕುಣಿಗಲ್, ತುಮಕೂರು ಗ್ರಾಮಾಂತರ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತುಮಕೂರು ನಗರ, ತಿಪಟೂರು, ಗುಬ್ಬಿ, ಪಾವಗಡ, ಮಧುಗಿರಿ, ಕೊರಟಗೆರೆ ಹಾಗೂ ಸಿರಾ ವಿಧಾನಸಭಾ ಕ್ಷೇತ್ರಗಳಿಂದಲೂ ಪ್ರತಿ ಬೂತ್ ಮಟ್ಟದಿಂದ 3 ಬೈಕ್‍ಗಳಲ್ಲಿ 6 ಮಂದಿ ಕಾರ್ಯಕರ್ತರು ಬೈರ್ ರ‍್ಯಾಲಿ ಮುಖೇನ ಬೆಂಗಳೂರಿನ ಬೃಹತ್ ಸಮಾವೇಶಕ್ಕೆ ಸಾಕ್ಷಿಯಾಗಲು ತೆರಳಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು, ಬಿಜೆಪಿ ಮುಖಂಡರಾದ ಸಿ.ಎನ್. ರಮೇಶ್, ಹೆಬ್ಬಾಕ ರವಿಶಂಕರ್, ಬಾವಿಕಟ್ಟೆ ನಾಗಣ್ಣ, ಡಾ. ಎಂ.ಆರ್. ಹುಲಿನಾಯ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

Facebook Comments

Sri Raghav

Admin