ಬಿಜೆಪಿ ಪರಿವರ್ತನಾ ರ‍್ಯಾಲಿ ಅಲ್ಲ ಪಶ್ಚಾತಾಪ ರ‍್ಯಾಲಿ : ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--01

ಬೆಂಗಳೂರು, ನ.2- ಬಿಜೆಪಿ ಇಂದಿನಿಂದ ಹಮ್ಮಿಕೊಂಡಿರುವ ಪರಿವರ್ತನಾ ರ‍್ಯಾಲಿಯನ್ನು ಪಶ್ಚಾತಾಪ ರ‍್ಯಾಲಿ ಎಂದು ಹೆಸರು ಬದಲಾವಣೆ ಮಾಡಿಕೊಳ್ಳುವುದು ಸೂಕ್ತ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾನುನು ಸುವ್ಯವಸ್ಥೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿವರ್ತನಾ ರ್ಯಾಲಿಯನ್ನು ಪಶ್ಚಾತ್ತಾಪ ರ್ಯಾಲಿ ಎಂದು ಹೆಸರು ಬದಲಾವಣೆ ಮಾಡಿಕೊಂಡು ಜನರ ಬಳಿಗೆ ಹೋಗಿ ಕ್ಷಮೆ ಕೇಳಿದರೆ ಒಳ್ಳೆಯದು ಎಂದು ಲೇವಡಿ ಮಾಡಿದರು.

2008ರಲ್ಲಿ ಬಿಜೆಪಿಗೆ ಜನರು ಅಧಿಕಾರ ನೀಡಿದರು. ಇವರು ಸರಿಯಾಗಿ ಆಡಳಿತ ಮಾಡಲಿಲ್ಲ ಮೂರು ಜನ ಮುಖ್ಯಮಂತ್ರಿಗಳು ಬದಲವಾಣೆಯಾದರು. ಸಾಲು ಸಾಲಾಗಿ ಜೈಲಿಗೆ ಹೋಗಿ ಬಂದರು. ಅವರು ಮಾಡಿದ ಹಗರಣಗಳನ್ನು ನನ್ನ ಬಾಯಿಂದ ಹೇಳಲು ಮನಸ್ಸು ಬರುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆಯೂ ಹೇಳುವಂತಿಲ್ಲ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿತ್ತು. ಇತ್ತೀಚೆಗೆ ಗುಜರಾತ್ ರಾಜ್ಯಸಭೆಯಲ್ಲಿ ಅಲ್ಲಿನ ಕಾಂಗ್ರೆಸ್ ಎಂಎಲ್‍ಎಗಳನ್ನು ಬೆಂಗಳೂರಿಗೆ ಕರೆತಂದಾಗ ಬಿಜೆಪಿಯವರು ಬೊಬ್ಬೆ ಹಾಕಿದರು. ಇವರ ಆಡಳಿತದಲ್ಲಿ ಅದೆಷ್ಟು ಬಾರಿ ರೆಸಾರ್ಟ್ ಯಾತ್ರೆ ಮಾಡಿದ್ದಾರೆ ಎಂಬುದನ್ನು ನೆನಪಿಸಿಕೊಳ್ಳಲಿ.

ಜನ ಕೊಟ್ಟ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡವರು ಈಗ ಪಶ್ಚಾತ್ತಾಪ ರ್ಯಾಲಿ ಮಾಡಬೇಕಿದೆ. ಇವರು ಮಾಡಿದ ತಪ್ಪುಗಳಿಗೆ ಕ್ಷಮೆಯೇ ಇಲ್ಲವಾದರೂ ಕನಿಷ್ಠ ಜನರ ಮುಂದೆ ಹೋಗಿ ತಮ್ಮನ್ನು ಕ್ಷಮಿಸಿ ಎಂದು ಕೇಳಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

Facebook Comments

Sri Raghav

Admin