ಬಿಸ್ಕತ್ ತಿಂದು ಆಸ್ಪತ್ರೆ ಸೇರಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Biscuts--02

ಲಕ್ನೊ, ನ.2-ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಬಿಸ್ಕತ್ ಸೇವಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ರಾಯ್ ಪ್ರದೇಶದ ದೀನದಯಾಳ್ ವಸತಿ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಸ್ಕತ್ ತಿಂದ ಕೆಲವೇ ಕ್ಷಣಗಳಲ್ಲಿ 10 ರಿಂದ 14 ವರ್ಷಗಳ ವಯೋಮಾನದ ವಿದ್ಯಾರ್ಥಿಗಳು ವಾಂತಿ ಮಾಡಲಾರಂಭಿಸಿ ತೀವ್ರ ಹೊಟ್ಟೆ ನೋವಿನಿಂದ ನರಳಿದರು.

ತಕ್ಷಣ 100ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ 46 ವಿದ್ಯಾರ್ಥಿಗಳ ಆರೋಗ್ಯ ತೀವ್ರ ಹದಗೆಟ್ಟಿದೆ. ಉಳಿದ 54 ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ಸತೀಶ್ ಸಿಂಗ್ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ವಸತಿ ಶಾಲೆ ಇದಾಗಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ವಿಶಾಖ್ ಹೇಳಿದ್ದಾರೆ.

Facebook Comments

Sri Raghav

Admin