ಸಿಲಿಂಡರ್ ಸ್ಫೋಟಕ್ಕೆ ನೆಲಸಮವಾಯ್ತು ಮನೆ

ಈ ಸುದ್ದಿಯನ್ನು ಶೇರ್ ಮಾಡಿ

Gas--01

ವಿಜಯಪುರ, ನ.2- ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಪೋಟಗೊಡು ಮನೆ ಜಖಂಗೊಂಡರೂ ಮನೆಯವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಮಧ್ಯಾಹ್ನ ನಡೆದಿದೆ. ಗ್ರಾಮದ ಮೆಹಬೂಬ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ವೃದ್ಧೆಯೊಬ್ಬರೇ ಇದ್ದರು. ಅಡುಗೆ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಆಕೆ ಮನೆಯಿಂದ ಹೊರಗೆ ಓಡಿಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲಿಡರ್ ಸ್ಫೋಟಕ್ಕೆ ತಗಡಿನ ಮನೆ ಜಖಂಗೊಂಡಿದೆ. ಮನೆಯಲ್ಲಿದ್ದ ದವಸ, ಧಾನ್ಯ, ಬಟ್ಟೆ, ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ದೇವರ ಹಿಪ್ಪರಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Facebook Comments

Sri Raghav

Admin