ಕಾರಿಗೆ ಟ್ಯಾಂಕರ್ ಡಿಕ್ಕಿ: ಗೃಹಪ್ರವೇಶದ ಸಿದ್ಧತೆಯಲಿದ್ದ ಉಪನ್ಯಾಸಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Ramanaga
ರಾಮನಗರ, ನ.4-ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಗುರುಮೂರ್ತಿ ಮೃತಪಟ್ಟ ಉಪನ್ಯಾಸಕ. ಗುರುಮೂರ್ತಿ ಇತ್ತೀಚೆಗಷ್ಟೇ ಹೊಸ ಮನೆ ನಿರ್ಮಾಣ ಮಾಡಿದ್ದು, ಸಂಬಂಧಿಕರಿಗೆ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಕಾರಿನಲ್ಲಿ ತೆರಳುತ್ತಿದ್ದರು. ರಾಮನಗರದ ಕನಕಪುರ ಸರ್ಕಲ್‍ನಲ್ಲಿ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ರಾಮನಗರ ಸಂಚಾರಿ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin