ಪವರ್ ಮಿನಿಸ್ಟರ್ ಗೆ ಮತ್ತೊಮ್ಮೆ ಐಟಿ ಶಾಕ್, ಕುಟುಂಬದವರಿಗೆಲ್ಲ ನೋಟೀಸ್

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar--01

ಬೆಂಗಳೂರು, ನ.5-ಇಂಧನ ಸಚಿವ ಡಿ.ಕೆ.ಶಿವಕುಮಾರ್‍ಗೆ ಐಟಿ ಇಲಾಖೆ ಮತ್ತೆ ಚಾಟಿ ಬೀಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಕುಟುಂಬದವರಿಗೆಲ್ಲ ನೋಟೀಸ್ ನೀಡುವ ಮೂಲಕ ಶಾಕ್ ನೀಡಿದೆ. ಡಿ.ಕೆ.ಶಿವಕುಮಾರ್ ಅವರ ತಾಯಿ, ಪತ್ನಿ, ಪುತ್ರಿ, ಸೋದರ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲರೂ ವಿಚಾರಣೆಗೆ ಹಾಜರಾಗಬೇಕೆಂದು ನೋಟೀಸ್ ನೀಡಿದೆ. ನಿನ್ನೆ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಈ ನೋಟಿಸನ್ನು ಐಟಿ ಅಧಿಕಾರಿಗಳು ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಅಲ್ಲದೆ ಈ ಬಾರಿ ವಿಚಾರಣೆಗೆ ಹಾಜರಾಗುವ ಸಂದರ್ಭದಲ್ಲಿ ಲೆಕ್ಕಪರಿಶೋಧಕರನ್ನು ಕರೆತರಬಾರದು ಎಂಬ ಸೂಚನೆಯನ್ನೂ ಕೂಡ ನೀಡಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಅಪಾರ ಪ್ರಮಾಣದ ಆಸ್ತಿ ಪತ್ರಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿಕೆಶಿ ಅವರ ಮೇಲೆ ನಡೆದ ಐಟಿ ದಾಳಿ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತಲ್ಲದೆ, ರಾಜಕೀಯವಾಗಿ ತೀವ್ರ ಚರ್ಚೆಯಾಗಿತ್ತು.

ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್‍ನಲ್ಲಿ ಆಪರೇಷನ್ ಕಮಲ ತಪ್ಪಿಸಲು 45 ಕಾಂಗ್ರೆಸ್ ಶಾಸಕರನ್ನು ರಾಜ್ಯಕ್ಕೆ ಕರೆತಂದು ಡಿಕೆಶಿ ರಕ್ಷಿಸಿ ಗುಜರಾತ್‍ನ ಕಾಂಗ್ರೆಸ್ ಅಭ್ಯರ್ಥಿ, ಸೋನಿಯಾ ಅವರ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಅವರ ಗೆಲುವಿಗೆ ಕಾರಣರಾಗಿದ್ದರು. ಈ ಸಂದರ್ಭದಲ್ಲಿ ಡಿಕೆಶಿ ನಿವಾಸ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆದಿತ್ತು.

Facebook Comments

Sri Raghav

Admin