ಕಾಂಗ್ರೆಸ್‍ನಲ್ಲಿ 20 ವರ್ಷ ದುಡಿದದವರಿಗೆ ಚುನಾವಣೆಯಲ್ಲಿ ಟಿಕೆಟ್

ಈ ಸುದ್ದಿಯನ್ನು ಶೇರ್ ಮಾಡಿ

sssss

ಬೆಂಗಳೂರು, ನ.6- ಕಾಂಗ್ರೆಸ್‍ನಲ್ಲಿ ಸುಮಾರು 20 ವರ್ಷ ದುಡಿದು ಜನರಿಗೆ ಹತ್ತಿರವಾಗಿರುವವರನ್ನು ಪರಿಗಣಿಸಿ ಮುಂದಿನ ಚುನಾವಣೆಯಲ್ಲಿ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ತಿಳಿಸಿದ್ದಾರೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿಯನ್ನು ಹೊತ್ತಿರುವ ಅವರು ಪಾಲಿಕೆ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಸ್ಪಷ್ಟ ಸಂದೇಶ ನೀಡಿದ್ದಾರೆ.

ಈಗಾಗಲೇ ಸಂಪೂರ್ಣವಾಗಿ ಯಶಸ್ಸು ಕಂಡಿರುವ ಮೊದಲ ಹಂತದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನದಿಂದ ಜನತೆಗೆ ವಿಶ್ವಾಸ ಮೂಡಿಸಲಾಗಿದೆ. ಎರಡನೆ ಹಂತದಲ್ಲೂ ಸಕ್ರಿಯರಾಗಿ ಎಲ್ಲರೂ ತೊಡಗಿ ಸರ್ಕಾರದ ಜನಪರ ಯೋಜನೆಗಳನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಬೇಕು ಎಂದು ತಾಕೀತು ಮಾಡಿದರು. ಇದೇ ವೇಳೆ ಕೆಲವರು ಪಕ್ಷದಲ್ಲಿ ಇದ್ದುಕೊಂಡೇ ಚುನಾವಣೆ ಸಂದರ್ಭದಲ್ಲಿ ಬೇರೆಯವರ ಪರವಾಗಿ ಕೆಲಸ ಮಾಡುತ್ತಾರೆ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಎಚ್ಚರಿಸಿದ್ದಾರೆ.

ಈ ಭಾಗದಲ್ಲಿ ಬಿಜೆಪಿ ಶಾಸಕರ ವೈಫಲ್ಯವನ್ನು ನೀವು ಜನರಿಗೆ ಅರ್ಥಮಾಡಿಸಬೇಕು. ಯಾವುದೇ ಆಂತರಿಕ ಕಲಹ ಏನೇ ಇದ್ದರೂ ಪಕ್ಷದ ನಿಷ್ಠರಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಬೇಡಿಕೆಯನ್ನು ಕೂಡ ಪರಿಗಣಿಸಲಾಗುತ್ತದೆ.
ಒಟ್ಟಾರೆ ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತದೆಯೋ ಅವರಿಗೆ ನೀವೆಲ್ಲರೂ ಬೆಂಬಲ ನೀಡಬೇಕು ಎಂದು ತಿಳಿಸಿದರು.

ಸಂಘಟನೆ ದೃಷ್ಟಿ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾರ್ಯಕರ್ತರು ಹಾಗೂ ಮುಖಂಡರ ವಲಯದಲ್ಲಿ ಸಂಗ್ರಹವಾದ ಅಭಿಪ್ರಾಯಗಳನ್ನು ಕೆಪಿಸಿಸಿ ಅಧ್ಯಕ್ಷರ ಬಳಿ ತಿಳಿಸುತ್ತೇನೆ. ಮುಂದೆಯೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ನೀವು ಚುನಾವಣೆಗೆ ಸಜ್ಜಾಗಬೇಕು ಎಂದು ತಿಳಿಸಿದರು. ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ನಾಯ್ಡು, ಪಾಲಿಕೆ ಸದಸ್ಯರಾದ ಕೃಷ್ಣಮೂರ್ತಿ, ಮಂಜುಳಾ ವಿಜಯಕುಮಾರ್, ಕವಿಕಾ ಅಧ್ಯಕ್ಷ ಮನೋಹರ್, ಬ್ಲಾಕ್ ಅಧ್ಯಕ್ಷರಾದ ಸುಧಾಕರ್, ಮುರಳೀಧರ್ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin