ಕೇಂದ್ರ ಕೈಗಾರಿಕಾ ರಕ್ಷಣಾ ಸೇನೆಯಲ್ಲಿ ಕಾನ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

cisf

ಕೇಂದ್ರ ಗೃಹ ಸಚಿವಾಲಯದ ಕೈಗಾರಿಕಾ ರಕ್ಷಣಾ ಸೇನೆ (ಸಿ ಐ ಎಸ್ ಎಫ್) ಯಲ್ಲಿ ಕಾನ್ಟೇಬಲ್ ಮತ್ತು ಟ್ರೇಡ್ ಮ್ಯಾನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ ; 378

ವಿದ್ಯಾರ್ಹತೆ :  ಮೆಟ್ರಿಕ್ಯುಲೇಷನ್ (10ನೇ ತರಗತಿ) ಅಥವಾ ಇದಕ್ಕೆ ಸಮನಾದ ಶಿಕ್ಷಣದಲ್ಲಿ  ಉತ್ತೀರ್ಣರಾಗಿರಬೇಕು.

ವಯೋಮಿತಿ : 18 ರಿಂದ 23 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ನಿಯಮಗಳ ಆಧಾರದಲ್ಲಿ ವಯೋಮಿತಿಯ಻ಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ : ಸಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಿಗೊಳಿಸಲಾಗಿದ್ದು,  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ನಿವೃತ್ತ ಸೇನಾ ಸಿಬ್ಬಂದಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಎಸ್ ಬಿ ಐ ಚಲನ್, ಆನ್ ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಯ ಎತ್ತರ ಪರೀಕ್ಷೆ, ದೈಹಿಕ ದಕ್ಷತೆ ಮತ್ತು ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲಾತಿಗಳ ಆಧಾರದಲ್ಲಿ ಆಯ್ಕೆ ಪ್ರಕ್ರೀಯೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 20-11-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ https://cisfrectt.in ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments