ನಾಳೆಯಿಂದ ಹೈಟೆಕ್ ಬಸ್ ಮೂಲಕ ಜೆಡಿಎಸ್ ಪ್ರಚಾರ ಯಾತ್ರೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

Vikasa-Vahini--03

ಬೆಂಗಳೂರು,ನ.6-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್ ಚುನಾವಣಾ ಪ್ರಚಾರ ಯಾತ್ರೆ ನಾಳೆಯಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭವಾಗಲಿದ್ದು, ಕರ್ನಾಟಕ ವಿಕಾಸ ವಾಹಿನಿ ಬಸ್ ಮೂಲಕ ಚುನಾವಣಾ ಪ್ರಚಾರದ ಯಾತ್ರೆಯನ್ನು ಪಕ್ಷ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಕುಮಾರಸ್ವಾಮಿ ಹಾಗೂ ಪಕ್ಷದ ಮುಖಂಡರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಲಿಂಗದೇವರ ಕೊಪ್ಪಲಿನ ಮೈದಾನದಲ್ಲಿ ಆಯೋಜಿಸಲಿರುವ ಕುಮಾರ ಪರ್ವ 2018 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ನಾಳೆ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರ ಪರ್ವ ಹೆಸರಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಮಾಜಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಆಯೋಜಿಸಲಾಗಿದೆ.

ಮೈಸೂರಿನ ಕಾರ್ಯಕ್ರಮದ ನಂತರ ವಿಕಾಸ ವಾಹಿನಿ ಬಸ್‍ನಲ್ಲಿ ಪ್ರಯಾಣ ಬೆಳೆಸುವ ಕುಮಾರಸ್ವಾಮಿ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದ ಸಭೆ ಹಾಗೂ ರ್ಯಾಲಿಗಳನ್ನು ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕೂಡ ಮುಂದುವರೆಸಲಿದ್ದಾರೆ.

Facebook Comments

Sri Raghav

Admin