ಸದ್ಯದಲ್ಲೇ ಹೊರಬೀಳಲಿವೆ ಸಿದ್ದರಾಮಯ್ಯ ಟೀಮ್ ನ ಮತ್ತೆರಡು ವಿಕೆಟ್..?

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಬೆಂಗಳೂರು,ನ.6-ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಹಾಗೂ ಅವರ ಪುತ್ರ ಪಕ್ಷ ತೊರೆದು ಬಿಜೆಪಿ ಸೇರುವುದು ಬಹುತೇಕ ಖಚಿತಪಟ್ಟಿದೆ. ನಗರವನ್ನು ಪ್ರತಿನಿಧಿಸುತ್ತಿರುವ ಈ ಇಬ್ಬರು ಮುಖಂಡರು ಕೈ ತೊರೆದು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಕಮಲ ಪಾಳಯ ಸೇರುವುದು ಖಚಿತ ಎಂದು ಬಿಜೆಪಿ ಉನ್ನತ ಮೂಲಗಳು ಈ ಸಂಜೆಗೆ ದೃಢಪಡಿಸಿವೆ. ಬೆಂಗಳೂರು ನಗರದ ಮೇಲೆ ಹಿಡಿತ ಸಾಧಿಸಬೇಕೆಂದರೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ಜತೆ ಮತ್ತಿಬ್ಬರು ಪ್ರಮುಖ ನಾಯಕರು ಬಿಜೆಪಿಯಲ್ಲಿ ಇರಬೇಕು ಎಂಬ ಲೆಕ್ಕಾಚಾರಕ್ಕೆ ಬಂದಿರುವ ರಾಜ್ಯಾಧ್ಯಕ್ಷ ಯಡಿಯೂರಪ್ಪಈ ಇಬ್ಬರು ಕೈ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಅವರ ಜತೆ ಮಾತುಕತೆಯ ನಂತರ ಕಮಲ ಪಾಳಯ ಸೇರಲು ಈ ಇಬ್ಬರು ಉತ್ಸುಕತೆ ತೋರಿದ್ದು ಮಾರ್ಚ್ ತನಕ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂದರೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಸೀಟುಗಳನ್ನು ಗೆಲ್ಲಲೇಬೇಕು ಎಂಬ ಲೆಕ್ಕಾಚಾರ ಬಿಎಸ್‍ವೈ ಅವರದ್ದು. ಹೀಗಾಗಿಯೇ ಕಾಂಗ್ರೆಸ್ ಇಬ್ಬರು ಪ್ರಬಲ ಮುಖಂಡರನ್ನು ಸೆಳೆಯುವ ಸಾಹಸಕ್ಕೆ ಅವರು ಮುಂದಾಗಿದ್ದಾರೆ.

ತಮ್ಮ ಈ ನಿರ್ಧಾರವನ್ನು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ಗ್ರೀನ್ ಸಿಗ್ನಲ್ ಪಡೆದೇ ಕಾಂಗ್ರೆಸ್ ಮುಖಂಡರನ್ನು ಪಕ್ಷಕ್ಕೆ ಕರೆ ತರುವ ಕಾರ್ಯಕ್ಕೆ ಕೈ ಹಾಕಿದ್ದಾರೆ ಎಂದು ತಿಳಿದುಬಂದಿದೆ.  ಬಿಎಸ್‍ವೈ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ನಗರದಲ್ಲಿ ಅವರ ವಿರೋಧಿ ಪಾಳಯವೂ ಚುರುಕಾಗಿ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ವಿರೋಧಿಗಳಿಗೆ ತಕ್ಕಪಾಠ ಕಲಿಸುವ ಉದ್ದೇಶದಿಂದಲೇ ಅವರು ನಗರದಲ್ಲಿ ತಮ್ಮ ವರ್ಚಸ್ಸು ವೃದ್ಧಿಸಿಕೊಳ್ಳುವುದಕ್ಕೋಸ್ಕರ ಈ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿರುವ ತಮ್ಮ ವಿರೋಧಿಗಳನ್ನು ಬಗ್ಗು ಬಡಿಯಲು ಈ ಇಬ್ಬರಿಂದ ಸಾಧ್ಯ ಎಂಬುದು ಯಡಿಯೂರಪ್ಪ ಅವರ ಲೆಕ್ಕಾಚಾರ.ಸಹಜವಾಗಿಯೇ ಈ ಲೆಕ್ಕಾಚಾರ ಕಮಲ ಪಾಳಯದ ಕೆಲ ನಾಯಕರ ನಿದ್ದೆಗೆಡಿಸಿರುವುದಂತೂ ಸತ್ಯ.

Facebook Comments

Sri Raghav

Admin