ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ 2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Raja--01

ನವದೆಹಲಿ, ನ.7- ಭಾರೀ ಕುತೂಹಲ ಮೂಡಿಸಿರುವ 2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಡಿಸೆಂಬರ್ 5ರಂದು ಪ್ರಕಟಗೊಳ್ಳಲಿದ್ದು, ಈ ತೀರ್ಪು ಇಡೀ ದೇಶದ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕೇಂದ್ರದ ಮಾಜಿ ಸಚಿವ ಎ.ರಾಜಾ ಸೇರಿದಂತೆ ಹಲವಾರು ಘಟಾನುಘಟಿಗಳು, ಟೆಲಿಕಾಂ ಸಂಸ್ಥೆಗಳ ಮಾಲೀಕರು 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.  ಡಿ.5ರಂದು 2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಪ್ರಕಟಿಸುವುದಾಗಿ ವಿಶೇಷ ನ್ಯಾಯಾಲಯ ಘೋಷಿಸುತ್ತಿದ್ದಂತೆ ಹಲವರ ಎದೆಯಲ್ಲಿ ನಡುಕ ಉಂಟಾಗಿದೆ. ಒಂದು ವೇಳೆ ಮನಮೋಹನ್‍ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಟೆಲಿಕಾಂ ಸಚಿವರಾಗಿದ್ದ ಎ.ರಾಜಾ ಅವರು ದೋಷಿ ಎಂದು ಪ್ರಕಟವಾದರೆ ಅದು ಇಡೀ ದೇಶದ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀಳುವ ಸಾಧ್ಯತೆಗಳಿವೆ.

2007-2008ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹೊಸ ಟೆಲಿಕಾಂ ಪರವಾನಗಿ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಸಿತ್ತು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಎ.ರಾಜಾ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪುತ್ರಿ ಎಂ.ಕೆ.ಕನಿಮೋಳಿ, ಅಂಬಾನಿ ಗ್ರೂಪ್ ಮುಖ್ಯಸ್ಥ ಅನಿಲ್ ಧೀರೂಬಾಯ್ ಅಂಬಾನಿ, ಸ್ವಾನ್ ಟೆಲಿಕಾಂ ಸಂಸ್ಥೆ ಹಾಗೂ ತಮಿಳುನಾಡಿನ ವೈರ್‍ಲೆಸ್ ಸಂಸ್ಥೆಗಳ ವಿರುದ್ಧ ದೂರು ದಾಖಲಾಗಿತ್ತು.

2ಜಿ ಸ್ಪೆಕ್ಟ್ರಂ ಹಗರಣ ಕುರಿತಂತೆ ಸಿಬಿಐ ಎರಡು ಹಾಗೂ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಒಂದು ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಂಡಿದ್ದ ವಿಶೇಷ ನ್ಯಾಯಾಲಯ ಸುದೀರ್ಘ ವಿಚಾರಣೆ ನಡೆಸಿದ್ದು, ಡಿ.5ರಂದು ತೀರ್ಪು ಪ್ರಕಟಿಸುವುದಾಗಿ ಘೋಷಣೆ ಮಾಡಿದೆ. ಏನಿದು ಹಗರಣ? ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ನಿಯಮ ಮೀರಿ ತಮಗೆ ಬೇಕಾದ ಸಂಸ್ಥೆಗಳಿಗೆ 2ಜಿ ಸ್ಪೆಕ್ಟ್ರಂ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಂದ್ರದ ಮಾಜಿ ಸಂಪರ್ಕ ಖಾತೆ ಸಚಿವ ಎ.ರಾಜಾ ಅವರ ಮೇಲಿದೆ.

2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ಮೂರು ದೂರು ದಾಖಲಾಗಿದ್ದು, ಮೊದಲನೆ ದೂರಿನಲ್ಲಿ ರಾಜಾ ಅವರು ಸ್ವಾನ್ ಟೆಲಿಕಾಂ, ರಿಲಾಯನ್ಸ್ ಹಾಗೂ ಯೂನಿಟೆಕ್ ವೈರ್‍ಲೆಸ್ ಸಂಸ್ಥೆಗಳಿಗೆ ಬೇಕಾಬಿಟ್ಟಿ ಸ್ಪೆಕ್ಟ್ರಂ ಹಂಚಿಕೆ ಮಾಡಿದ್ದು, ಈ ಹಗರಣದಲ್ಲಿ ಕನಿಮೋಳಿ ಟೆಲಿಕಾಂ ಸಂಸ್ಥೆ ನಿವೃತ್ತ ಕಾರ್ಯದರ್ಶಿ ಸಿದ್ಧಾರ್ಥ ಬೆಹೂರಾ, ರಾಜಾ ಅವರ ಮಾಜಿ ಆಪ್ತ ಕಾರ್ಯದರ್ಶಿ ಸೇರಿದಂತೆ ರಿಲಾಯನ್ಸ್ ಸಂಸ್ಥೆ ಮುಖ್ಯಸ್ಥ ಅನಿಲ್ ಧೀರೂಬಾಯ್ ಅಂಬಾನಿ, ಕಲೈಂಜರ್ ಟಿವಿಯ ನಿರ್ದೇಶಕರುಗಳು ಶಾಮೀಲಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ವಿಶೇಷ ನ್ಯಾಯಾಲಯದಲ್ಲಿ ಎರಡು ದಾವೆ ಹೂಡಿದ್ದರು.

2ಜಿ ಸ್ಪೆಕ್ಟ್ರಂ ಹಂಚಿಕೆಯಲ್ಲಿ 30,984 ಕೋಟಿ ರೂ.ಗಳ ಹಗರಣ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಅನಿಲ್ ಅಂಬಾನಿ, ಟೀನಾ ಅಂಬಾನಿ, ಕಾರ್ಪೊರೇಟ್ ಸಂಸ್ಥೆ ಮುಖ್ಯಸ್ಥೆ ನೀರಾ ರಾಡಿಯಾ ಸೇರಿದಂತೆ 154 ಮಂದಿಯ ವಿಚಾರಣೆ ನಡೆಸಿ 4400 ಪುಟಗಳ ತೀರ್ಪು ಸಿದ್ಧಪಡಿಸಿದೆ.
ಡಿ.5ರಂದು

Facebook Comments

Sri Raghav

Admin