ನಾನು ಸರ್ಕಾರದ ಏಜೆಂಟ್ ಅಲ್ಲ : ಶ್ರೀ ರವಿಶಂಕರ್ ಗುರೂಜಿ

ಈ ಸುದ್ದಿಯನ್ನು ಶೇರ್ ಮಾಡಿ

Ravishankar-Guruji

ಚಂಡಿಗಢ, ನ.7-ಆಯೋಧ್ಯೆಯ ರಾಮಮಂದಿರ ವಿವಾದ ಇತ್ಯರ್ಥಕ್ಕಾಗಿ ಮಧ್ಯಸ್ಥಿಕೆಗೆ ಮುಂದಾಗಿರುವ ತಮ್ಮನ್ನು ಸರ್ಕಾರದ ಏಜೆಂಟ್ ಎಂಬ ಕಾಂಗ್ರೆಸ್ ಟೀಕೆಯನ್ನು ಆರ್ಟ್ ಆಫ್ ಲೀವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ತಳ್ಳಿ ಹಾಕಿದ್ದಾರೆ. ನಾನು ಯಾವಾಗಲೂ ನನ್ನ ಇಚ್ಛೆಯಂತೆ ಕಾರ್ಯನಿರ್ವಹಿಸುತ್ತೇನೆ ಹೊರೆತು, ಯಾರ ಅಣತಿಯಂತೆ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ಧಾರೆ.

ಚಂಡಿಗಢದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಧ್ಯೆಯಲ್ಲಿ ರಾಮಮಂದಿರ ವಿವಾದವನ್ನು ಬಗೆಹರಿಸುವುದು ನನ್ನ ಉದ್ದೇಶ. ಇದಕ್ಕಾಗಿ ನಾನು ಈಗಾಗಲೇ ಕಾರ್ಯೋನ್ಮುಖನಾಗಿದ್ದೇನೆ. ಈ ವಿಚಾರದಲ್ಲಿ ನಾನು ಯಾರ ಪರವಾಗಿಯೂ ಇಲ್ಲ. ಇದಕ್ಕೆ ಸಂಬಂಧಪಟ್ಟ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಮಾರ್ಗೋಪಾಯಗಳನ್ನು ನಾವು ಕಂಡುಕೊಳ್ಳಬಹುದಾಗಿದೆ ಎಂದರು.

Facebook Comments

Sri Raghav

Admin