ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಮ್ಮಾಪುರ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

R.B.Timmapura

ಬೆಂಗಳೂರು, ನ.7-ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಕಾರ್ಯನಿರ್ವಹಿಸುತ್ತಿದ್ದರು.  ಕೆಲ ತಿಂಗಳ ಹಿಂದೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಧಾನಪರಿಷತ್ ಸದಸ್ಯರೂ ಆಗಿರುವ ಆರ್.ಬಿ.ತಿಮ್ಮಾಪುರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗಿತ್ತು. ಉಮಾಶ್ರೀ ಅವರು ಈಗಾಗಲೇ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಹೆಚ್ಚುವರಿಯಾಗಿ ಬಾಗಲಕೋಟೆಯನ್ನು ನಿರ್ವಹಿಸುತ್ತಿದ್ದರು. ಇದೀಗ ತಿಮ್ಮಾಪುರ್ ಹೆಗಲಿಗೆ ತವರು ಜಿಲ್ಲೆಯನ್ನು ನೀಡಲಾಗಿದೆ.

Facebook Comments

Sri Raghav

Admin