ಮಂಗಳೂರಿನ ತಲಪಾಡಿಯಲ್ಲಿ ಮೂವರು ಬ್ಯಾಂಕ್ ಸಿಬ್ಬಂದಿ ಅನುಮಾನಸ್ಪದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body--01

ಮಂಗಳೂರು, ನ.7- ಬ್ಯಾಂಕ್‍ವೊಂದರ ಕಾವಲಿಗಿದ್ದ ಮೂವರು ಸಿಬ್ಬಂದಿ ಅನುಮಾನಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮಂಗಳೂರಿನ ತಲಪಾಡಿಯ ಕೆ.ಸಿ.ರಸ್ತೆಯಲ್ಲಿ ಸಂಭವಿಸಿದೆ. ಮಂಗಳೂರು ಕೋಟೆಕಾರು ವ್ಯವಸಾಯ ಸಹಕಾರಿ ಸಂಘದಲ್ಲಿ ಈ ಘಟನೆ ಸಂಭವಿಸಿದ್ದು, ಬ್ಯಾಂಕಿನ ಒಳಗೆ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಕಾರಣ ತಿಳಿದು ಬರಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇಬ್ಬರು ಅಪರಿಚಿತ ವ್ಯಕ್ತಿಗಳ ಶವ ಪತ್ತೆ:
ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 55 ಮತ್ತು 65 ವರ್ಷ ವಯಸ್ಸಿನ ಇಬ್ಬರು ಅಪರಿಚಿತ ವ್ಯಕ್ತಿಗಳ ಶವ ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.

Facebook Comments

Sri Raghav

Admin