ಕಾಂಗ್ರೆಸ್ ಜಾಹಿರಾತು ನೀಡುವ ಸರ್ಕಾರ : ಎಚ್‍ಡಿಕೆ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--02

ಚಿಕ್ಕಮಗಳೂರು,ನ.8 – ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಚಾರಕ್ಕಾಗಿ ಜಾಹೀರಾತು ನೀಡುವ ಸರ್ಕಾರವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇವಲ ಪ್ರಚಾರಕ್ಕಾಗಿ ಕೋಟಿ ಕೋಟಿ ರೂ. ವೆಚ್ಚದ ಜಾಹಿರಾತುಗಳನ್ನು ನೀಡುತ್ತಿದೆಯೇ ಹೊರತು ರಾಜ್ಯದ ಜನರಿಗೆ ಯಾವುದೇ ರೀತಿಯ ಅನುಕೂಲ ಕಲ್ಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾಗಿರುವ ಸಣ್ಣ ಕೆಲಸಗಳೂ ಕೂಡ ಸರ್ಕಾರ ಮಾಡುತ್ತಿಲ್ಲ. ಕೇವಲ ಜಾಹಿರಾತುಗಳ ಮೂಲಕ ಪ್ರಚಾರ ಪಡೆಯುತ್ತಿದೆ ಎಂದು ಟೀಕಿಸಿದರು.

ರಾಜ್ಯದ ಜನರಿಗೆ ಸಾಲದ ಭಾಗ್ಯ ನೀಡಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಧನೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಜೆಡಿಎಸ್ ಅಧಿಕಾರಿದಲ್ಲಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳಿಗೆ ಭಾಗ್ಯದ ರೂಪ ನೀಡಿ ಪಡೆಯುತ್ತಿದೆ. ಸಿದ್ದರಾಮಯ್ಯನವರು ತಮ್ಮ ದುರಹಂಕಾರದ ಮಾತುಗಳ ಮೂಲಕ ಜನರ ಸಂಯಮವನ್ನು ಪರೀಕ್ಷೆ ಮಾಡುತ್ತಿದ್ದು ಮುಂದಿನ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin