ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Tractor--01

ವಿಜಯಪುರ, ನ.8- ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಮಹಾನಂದ ಹಡಪದ (30), ಬೇಗಂ ತೆಗ್ಗಿಹಳ್ಳಿ (24) ಮೃತಪಟ್ಟ ಕಾರ್ಮಿಕರು. ಕೆಲಸದ ನಿಮಿತ್ತ ಮಹಾರಾಷ್ಟ್ರದಿಂದ ಮುಧೋಳಕ್ಕೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಟ್ರ್ಯಾಲಿ ಕೆಳಗೆ ಸಿಲುಕಿದ ಈ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಬಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin