ನಂಜನಗೂಡಿಗೆ ಬೆಳವಾಡಿ ಶಿವುಕುಮಾರ್ ಜೆಡಿಎಸ್ ಅಭ್ಯರ್ಥಿ ?

ಈ ಸುದ್ದಿಯನ್ನು ಶೇರ್ ಮಾಡಿ

nanjana-gudu
ನಂಜನಗೂಡು, ನ.8-ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಸ್‍ಸಿ ಘಟಕದ ಜಿಲ್ಲಾಧ್ಯಕ್ಷ ಬೆಳವಾಡಿ ಶಿವುಕುಮಾರ್ ಕಣಕ್ಕಿಳಿಸುವ ಬಗ್ಗೆ ವರಿಷ್ಠರಲ್ಲಿ ಒಲವು ಇದೆ. ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆಗಿಳಿಯದೆ ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದು ಎಲ್ಲರಿಗೂ ತಿಳಿದ ವಿಷಯವಾಗಿದೆ.

ಕಳೆದ 20 ವರ್ಷಗಳಿಂದ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದು 2 ಬಾರಿ ಜೆಡಿಎಸ್ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ 40 ಸಾವಿರಕ್ಕೂಹೆಚ್ಚುಮತಗಳನ್ನು ಪಡೆದು ಪರಾಭವಗೊಂಡಿದ್ದ ಕಳಲೆ ಕೇಶವಮೂರ್ತಿರವರು ಕಾಂಗ್ರೆಸ್‍ಗೆ ಸೇರ್ಪಡೆಗೊಂಡು ಈಗ ಶಾಸಕರಾಗಿರುವುದು ಹಳೆಯ ವಿಷಯವಾಗಿದೆ. ಕಳಲೆ ಕೇಶವಮೂರ್ತಿರವರು ಕಾಂಗ್ರೆಸ್ ಸೇರುತ್ತಿದಂತೆ ಜೆಡಿಎಸ್ ಪಕ್ಷವು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಸಂಘಟನೆಯ ಚತುರಾಗಿರುವ ಮತ್ತು ಎಲ್ಲಾ ಜನಾಂಗದವರ ವಿಶ್ವಾಸಗಳಿಸಿರುವ ಮೈಸೂರು ಜಿಲ್ಲಾ ಎಸ್.ಸಿ, ಘಟಕಕ್ಕೆ ವಿಶ್ವಾಸ ತುಂಬುವ ಮೂಲಕ ಪಕ್ಷದ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸಿದ್ದರು. ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠರು ಬೆಳವಾಡಿ ಶಿವುಕುಮಾರ್ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Facebook Comments

Sri Raghav

Admin