ಮಂಜಿನಲ್ಲಿ ಮುಚ್ಚಿಹೋದ ದೆಹಲಿ, ಸರಣಿ ಅಪಫಾತ, ಸಂಚಾರ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

Fog--02

ನವದೆಹಲಿ, ನ.8-ವಾಯುಮಾಲಿನ್ಯದಿಂದ ತತ್ತರಿಸಿರುವ ರಾಜಧಾನಿಯಲ್ಲಿ ಮಂಜು ಮುಸುಕಿದ ವಾತಾವರಣದಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಸರಣಿ ಅಪಫಾತಗಳು ಸಂಭವಿಸಿದೆ. ಹೆದ್ದಾರಿಗಳಲ್ಲಿ ಒಂದರ ಹಿಂದೆ ಒಂದರಂತೆ ಕಾರುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹವಾಮಾನ ವೈಪರೀತ್ಯದಿಂದ ದೆಹಲಿಯಲ್ಲೀಗ ಎಚ್ಚರಿಕೆಯ ಸಂದೇಶ ರವಾನಿಸಲಾಗಿದ್ದು, ವಾಯುಮಾಲಿನ್ಯ ಅಪಾಯಕಾರಿ ಮಟ್ಟ ತಲುಪಿರುವುದರಿಂದ ಶನಿವಾರದ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಿಸಲಾಗಿತ್ತು. ದಟ್ಟ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು ಹೆಡ್‍ಲೈಟ್ ಆನ್ ಮಾಡಿಕೊಂಡು ವಾಹನ ಚಲಾಯಿಸುವುದು ದುಸ್ತರವಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

Facebook Comments

Sri Raghav

Admin