ಪರಿಶಿಷ್ಟ ಪಂಗಡಕ್ಕೆ ಮೊಗೇರರನ್ನು ಸೇರಿಸಿ ಸುಪ್ರೀಂ ಮಹತ್ವದ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Suprem-Court

ನವದೆಹಲಿ,ನ.10-ಕರ್ನಾಟಕ ರಾಜ್ಯದ ಅತ್ಯಂತ ಹಿಂದುಳಿದ ಮೊಗೇರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಇದರಿಂದಾಗಿ ಈ ಸಮುದಾಯ ದೀರ್ಘ ಕಾಲದಿಂದಲೂ ನಡೆಸುತ್ತಿದ್ದ ಹೋರಾಟಕ್ಕೆ ಗೆಲುವು ದೊರೆತಂತಾಗಿದೆ.  ಮೊಗೇರರು ಎಸ್ಟಿ (ಪರಿಶಿಷ್ಟ ಪಂಗಡ) ಸೇರಿಸಿ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.
ಈ ಪ್ರಕರಣ ಕುರಿತು ಇಂದು ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ತಳ್ಳಿ ಹಾಕಿದೆ. ಈ ಆದೇಶದಿಂದ ಮೊಗೇರ ಸಮುದಾಯ ಸಂತಸಗೊಂಡಿದೆ.

Facebook Comments

Sri Raghav

Admin