ಸಣ್ಣಪುಟ್ಟ ಘಟನೆ ಹೊರತುಪಡಿಸಿದರೆ ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆದಿದೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಕೊಪ್ಪಳ, ನ.10- ಟಿಪ್ಪು ಜಯಂತಿ ಆಚರಣೆ ಎಲ್ಲ ಕಡೆ ಶಾಂತಿಯುತವಾಗಿ ನಡೆದಿದೆ. ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ತಾಲೂಕಿನ ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲೋ ಒಂದು ಕಡೆ ಮಾತ್ರ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಷ್ಟನ್ನು ಹೊರತುಪಡಿಸಿದರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಮಾಜಿ ಎಂಎಲ್‍ಸಿ ಸಿ.ಎಚ್.ಆರ್.ಶ್ರೀನಿವಾಸ್ ಆರೋಪ-ಪ್ರತ್ಯಾರೋಪ ವಿಚಾರ ಕೀಳುಮಟ್ಟದ್ದು. ಯಾರೇ ಮಾಡಿದ್ದರೂ ತಪ್ಪು. ಈ ಬಗ್ಗೆ ನಾನು ಅನ್ಸಾರಿ ಜತೆ ಮಾತನಾಡುತ್ತೇನೆ ಎಂದು ಹೇಳಿದರು. ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ಪಕ್ಷ ಸೇರುವುದು ಖಚಿತ. ಅವರು ಕಾಂಗ್ರೆಸ್ ಪಕ್ಷ ಸೇರಿದ ಮೇಲೆ ಕಾಂಗ್ರೆಸ್‍ಮೆನ್ ಆಗುತ್ತಾರೆ ಎಂದರು.ಡಿಕೆಶಿ ಬಿಜೆಪಿ ಸೇರ್ಪಡೆ ವಿಚಾರ ಶುದ್ಧ ಸುಳ್ಳು. ಅವರು ಯಾವುದೇ ಕಾರಣಕ್ಕೂ ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Facebook Comments

Sri Raghav

Admin